ಬೆಂಗಳೂರು:ಅಕ್ರಮ ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹೈಕೋರ್ಟ್​ನಲ್ಲಿ ದಾಖಲಿಸಿದ್ದ 3 ಅರ್ಜಿಗಳನ್ನು ತಾಂತ್ರಿಕ ಕಾರಣಗಳಿಂದ ಅರ್ಜಿದಾರರು ಹಿಂಪಡೆದಿದ್ದು, ಬಿಎಸ್​ವೈ ಮತ್ತು ಅವರ ಕುಟುಂಬಕ್ಕೆ ತಾತ್ಕಾಲಿಕ ನಿರಾಳತೆ ಸಿಕ್ಕಿದೆ.
ಬಿಎಸ್​ವೈ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಶಿವಮೊಗ್ಗದ ವಕೀಲ ಬಿ. ವಿನೋದ್ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ ಬುಧವಾರ ವಿಚಾರಣೆ ನಡೆಸಿತು. ಈ ವೇಳೆ ನ್ಯಾಯಪೀಠ, ಸಾರ್ವಜನಿಕ ಹುದ್ದೆಯಲ್ಲಿರುವ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸುವ ಮುನ್ನ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕು ಎಂದು 2020ರ ಜುಲೈನಲ್ಲಿ ಡಿಸಿಪಿ ದೇವರಾಜ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರು ಪೂರ್ವಾನುಮತಿ ಪಡೆದಿಲ್ಲವೇಕೆ ಎಂದು ಪ್ರಶ್ನಿಸಿತು. ಆಗ ಅರ್ಜಿದಾರರ ಪರ ವಕೀಲರು, ಅರ್ಜಿಗಳನ್ನು ಹಿಂಪಡೆದು ಪೂರ್ವಾನುಮತಿ ಪಡೆದು ಹೊಸ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ ನ್ಯಾಯಪೀಠ ಅರ್ಜಿಗಳನ್ನು ಇತ್ಯರ್ಥಪಡಿಸಿತು.
ಈ ಕುರಿತು ಸ್ಪಷ್ಟನೆ ನೀಡಿರುವ ವಕೀಲ ಬಿ. ವಿನೋದ್, 1 ತಿಂಗಳಲ್ಲಿ ಮತ್ತೆ ಹೊಸದಾಗಿ ಸಲ್ಲಿಸುತ್ತೇನೆ ಎಂದಿದ್ದಾರೆ. ಸಚಿವ ಈಶ್ವರಪ್ಪ ವಿರುದ್ಧದ ಪ್ರಕರಣದಲ್ಲಿ ಈಗಾಗಲೆ ನ್ಯಾಯಾಲಯ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದು, ವಿಚಾರಣೆ ಶೇ. 80 ಪೂರ್ಣಗೊಂಡಿದೆ. ಆದ್ದರಿಂದ ಅವರ ವಿರುದ್ಧದ ಅರ್ಜಿ ವಾಪಸ್ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 9 =
Remember me
