ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿಯಲ್ಲಿ ಡಿ.17ರಿಂದ ಡಿ.19ರವರೆಗೆ ಮಳೆ ಸುರಿಯಲಿದೆ. ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಡಿ.18ರಂದು ಸಾಧಾರಣ ವರ್ಷಧಾರೆಯಾಗಲಿದೆ. ವಾತಾವರಣದಲ್ಲಿ ದಿಢೀರ್ ಬದಲಾವಣೆಯಿಂದ ಭಾನುವಾರ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಕೆಲವೆಡೆ ಹಗುರದಿಂದ ಕೂಡಿದ ಸಾಧಾರಣ ಮಳೆ ಬಿದ್ದಿದೆ.
ಇದನ್ನೂ ಓದಿ:ವೇದದ ಮಹತ್ವ ಬಗ್ಗೆ ಸಾರ್ವಜನಿಕರಿಗೆ ಅರಿವು:ಸಮ್ಮೇಳನಕ್ಕೆ ಚಾಲನೆ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ಮುಂದಿನ 2-3 ದಿನಗಳಲ್ಲಿ ಚಂಡಮಾರುತವಾಗಿ ಉಂಟಾಗಲಿದೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.ತಮಿಳುನಾಡು, ಕೇರಳ ಹಾಗೂ ಲಕ್ಷದ್ವೀಪದಲ್ಲಿ ಡಿ.16ರಿಂದ ಡಿ.18 ರವರೆಗೆ ಭಾರಿ ಮಳೆ ಸುರಿಯಲಿದೆ. ನಂತರ ಕ್ರಮೇಣ ಇಳಿಮುಖವಾಗಲಿದೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
