ಬೆಂಗಳೂರು:ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ 72 ಗಂಟೆ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮುಂದಿನ 48 ಗಂಟೆ ಹೆಚ್ಚು ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್​​​ ಘೋಷಿ ಸಲಾಗಿದೆ. ಈ ಅವಧಿಯಲ್ಲಿ 204.5 ಮಿಮೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸೆ.20ರಂದು ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ದಾವಣಗೆರೆ, ಮಂಡ್ಯ ಮತ್ತು ಮೈಸೂರಿನಲ್ಲಿ ಸೆ. 21ರಂದು ಯೆಲ್ಲೋ ಅಲರ್ಟ್ ಇರಲಿದೆ. ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − four =
Remember me
