ತುಮಕೂರು:ಬೇಸಿಗೆ ರಜೆ ಎಂದು ಮಕ್ಕಳ ಬಗ್ಗೆ ಉದಾಸೀನ ಬೇಡ. ಏಕೆಂದರೆ ಆಟಕ್ಕೆಂದು ಹೋದ ಮಕ್ಕಳು ಅಪಾಯಕ್ಕೆ ಒಳಗಾಗಬಹುದು. ಮಾತ್ರವಲ್ಲ, ಆಟ ಪ್ರಾಣಕ್ಕೇ ಮುಳುವಾಗುವ ಸಾಧ್ಯತೆ ಇರುತ್ತದೆ. ಹೀಗಾದ ಅನೇಕ ಉದಾಹರಣೆಗಳಿದ್ದು, ಇಂದು ಇಂಥದ್ದೇ ಮತ್ತೊಂದು ಅವಘಡ ಸಂಭವಿಸಿದ್ದು, ಮೂವರು ಬಾಲಕರು ಪ್ರಾಣ ಕಳೆದುಕೊಂಡಿದ್ದಾರೆ.
ತುಮಕೂರು ಜಿಲ್ಲೆಯ ಭರತ್ (12), ಆನಂದ್ (10) ಹಾಗೂ ವಿಶ್ವಾಸ್ (11) ಸಾವಿಗೀಡಾಗಿರುವ ಬಾಲಕರು. ತುಮಕೂರು ನಗರ ಹೊರವಲಯದ ತಿಮ್ಮಲಾಪುರದಲ್ಲಿ ಇಂದು ಈ ಅವಘಡ ಸಂಭವಿಸಿದೆ.
ಮಧ್ಯಾಹ್ನ ತಿಮ್ಮಲಾಪುರ ಕೆರೆಯಲ್ಲಿ ಈಜಲು ತೆರಳಿದ್ದ ಈ ಮೂವರು ಸ್ನೇಹಿತರು ದುರದೃಷ್ಟವಶಾತ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೆರೆಯ ದಡದಲ್ಲಿ ಬಟ್ಟೆ-ಚಪ್ಪಲಿ ಇದ್ದುದ್ದರಿಂದ ಯುವಕರು ನೀರಿನಲ್ಲಿ ಮುಳುಗಿರುವುದು ಪತ್ತೆಯಾಗಿದೆ. ಮೂವರು ಶವಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ನೇಹಿತನ ಶವ ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಾರ್ಗ ಮಧ್ಯೆ ಸ್ಥಳದಲ್ಲೇ ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 2 =
Remember me
