ಬೆಂಗಳೂರು:ಪುಲಕೇಶಿ ನಗರದ ಶಾಸಕ ಅಖಂಡ​ ಶ್ರೀನಿವಾಸ್​ ಅವರ ಮನೆ ಮೇಲೆ ಕಲ್ಲು ತೂರಾಟ ಪ್ರಕರಣವು ಉದ್ವಿಘ್ನತೆಗೆ ತಿರುಗಿದ್ದು, ಹಿಂಸಾಚಾರಕ್ಕೆ ತಿರುಗಿದೆ. ಈಗಾಗಲೇ ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ.
ಶಾಸಕರ ಬಾಮೈದನೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಕಲ್ಲು ತೂರಾಟ ನಡೆದಿದೆ.
ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದಾನೆ ಎನ್ನಲಾದ ಆರೋಪಿ ನವೀನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಸಬಂಧ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದು, ನವೀನ್‌ನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ಘಟನೆ ಸಂಬಂಧ 100 ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಹಾಗೂ ಉದ್ರಿಕ್ತ ಗಲಭೆಕೋರರ ನಡುವೆ ನಡೆದ ಚಕಮಕಿಯಲ್ಲಿ ಪೊಲೀಸ್​ ಫೈರಿಂಗ್​ ಮೂವರು ಬಲಿಯಾಗಿದ್ದಾರೆನ್ನಲಾಗಿದ್ದು, ಪೊಲೀಸರ ಗುಂಡೇಟು ತಿಂದು ಗಾಯಗೊಂಡಿರುವ ಕೆಲ ಆರೋಪಿಗಳು ಚಿಕಿತ್ಸೆ ಪಡೆಯದೆ ಎಸ್ಕೇಪ್ ಆಗಿದ್ದಾರೆ.
ಇನ್ನು ಘಟನೆಯಲ್ಲಿ 80ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ. ಈ ಸಂಬಂಧ ಡಿ ಜೆ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಸಕ ಜಮೀರ್ ಮತ್ತು ರಿಜ್ವಾನ್ ಅರ್ಷದ್ ಸ್ಥಳದಲ್ಲೇ ಬೀಡುಬಿಟ್ಟಿದ್ದು ಪರಿಸ್ಥಿತಿಯನ್ನು ತಹಬದಿಗೆ ತರಲು ಪ್ರಯತ್ನಿಸುತ್ತಿದ್ದಾರೆ.
ಕೈಮೀರಿದ ಪರಿಸ್ಥಿತಿ, 3 ಪೊಲೀಸ್ ಜೀಪ್​ಗಳಿಗೆ ಬೆಂಕಿ; ಗಲಾಟೆ ಮಾಡದಂತೆ ಮುಸ್ಲಿಮರಲ್ಲಿ ಮನವಿ ಮಾಡಿದ ಶಾಸಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 9 =
Remember me
