ಹುಬ್ಬಳ್ಳಿ:ಧಾರವಾಡದ ಬೈಪಾಸ್​ ರಸ್ತೆಯಲ್ಲಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ದುರಂತ ಸಾವಿಗೀಡಾಗಿದ್ದಾರೆ.
ಈ ಘಟನೆ ಇಂದು (ಜೂ. 11) ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರೆ 4ರ ಹಳಿಯಾಳ ಸೇತುವೆ ಬಳಿ ನಡೆದಿದೆ. ಮೃತಪಟ್ಟವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಾತನಹಳ್ಳಿ ಗ್ರಾಮದ ಚಂದನ್ (28), ಹೊಳೆನರಸಿಪುರದ ಟಿ.ವಿ. ದೀಪು(26) ಹಾಗೂ ಹೊಳೆನರಸಿಪುರ ತಾಲೂಕಿನ ಒಡನಹಳ್ಳಿ ಗ್ರಾಮ ಪುಟ್ಟಣ್ಣ ಮಡಿಕೇರಿ (33) ಎಂದು ಗುರುತಿಸಲಾಗಿದೆ. ಗಾಯಾಳು ಕಿರಣ್ (28) ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:ನನ್ನ ಪ್ರೇಯಸಿಯನ್ನು ನನಗೆ ಕೊಡಿಸಿ: ಸಲಿಂಗ ಸಂಗಾತಿಗಾಗಿ ಕೋರ್ಟ್​ ಮೆಟ್ಟಿಲೇರಿದ ಯುವತಿ!
ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟರೆ, ಇನ್ನೋರ್ವ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದನು. ಕಾರು ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದಾಗ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಹಾಸನ, ಮೈಸೂರು ಮೂಲದ ವ್ಯಕ್ತಿಗಳು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಇಂದು ಮಧ್ಯಾಹ್ನದಿಂದ ಎಲ್ಲಾ ಮಹಿಳೆಯರಿಗೂ ಬಸ್ ಫ್ರೀ! ಆದರೆ ಪಾಲಿಸಬೇಕಾದ ನಿಯಮಗಳು ಹೀಗಿವೆ…

ಡಿಜಿಟಲ್ ಪಾವತಿ, ಭಾರತ ನಂ.1: 2022ರಲ್ಲಿ ನಡೆದ ನಗದು ವರ್ಗಾವಣೆ | ಜಾಗತಿಕ ವಹಿವಾಟಿನಲ್ಲಿ ಇಂಡಿಯಾ ಪಾಲು ಶೇ. 46

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
