-ಮೃತರ ಕುಟುಂಬಕ್ಕೆ 2 ಲಕ್ಷ ರೂ., ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ
ಗದಗ:ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಹಿನ್ನೆಲೆ ಹುಟ್ಟಹಬ್ಬದ ಶುಭಾಶಯ ಕೋರುವ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.
ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್  ತಿಳಿಸಿದರು.
ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತ ಯುವಕರು. ಇನ್ನು ಘಟನೆಯಲ್ಲಿ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಇನ್ನು ಮೃತಪಟ್ಟ ಅಭಿಮಾನಿಗಳ ಮನೆಗೆ ಇಂದು (ಜ.08) ಸಂಜೆ 4 ಗಂಟೆಗೆ ನಟ ಯಶ್​ ಭೇಟಿ ನೀಡಲಿದ್ದಾರೆ ಎಂದು ಯಶ್​ ಆಪ್ತ ಮೂಲಗಳು ತಿಳಿಸಿವೆ.
KGF ನಟ ಯಶ್​​ಗೆ “ರಾಕಿಂಗ್ ಸ್ಟಾರ್ ಯಶ್” ಬಿರುದು ಬಂದಿದ್ದು ಹೇಗೆ ಗೊತ್ತಾ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × one =
Remember me
