ಹುಬ್ಬಳ್ಳಿ:ಫೆ.14ರಂದು ನಡೆದ ಪುಲ್ವಾಮಾ ದಾಳಿಗೆ ಒಂದು ವರ್ಷ ಕಳೆದ ಹಿನ್ನೆಲೆಯಲ್ಲಿ ದೇಶದ ಜನತೆ ಹುತಾತ್ಮ ಯೋಧರ ಸ್ಮರಣೆ ಮಾಡುತ್ತಿರುವ ಸಂದರ್ಭದಲ್ಲಿ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ಕಾಶ್ಮೀರ ಮೂಲದ ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ವಿಡಿಯೋವೊಂದನ್ನು ಹರಿ ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಮೂವರನ್ನು ಬಂಧಿಸಲಾಗಿದೆ.
ಬಂಧಿತರನ್ನು ಅಮೀರ್, ಬಾಸೀತ್, ತಾಲೀಬ್ ಎಂದು ಗುರುತಿಸಲಾಗಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸರ್ಕಾರಿ ಕೋಟಾದಲ್ಲಿ ಕಾಲೇಜಿಗೆ ದಾಖಲಾಗಿದ್ದ ಮೂವರು ಕಾಶ್ಮೀರ ವಿದ್ಯಾರ್ಥಿಗಳು ಸೆಲ್ಫಿ ವಿಡಿಯೋದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಮೂವರು ಸಿವಿಲ್ ವಿಭಾಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ. ಸದ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇದಕ್ಕೂ ಮುನ್ನ ಕಾಲೇಜಿಗೆ ಭೇಟಿ ನೀಡಿದ ಭಜರಂಗದಳದ ಕಾರ್ಯಕರ್ತರು, ಕೂಡಲೇ ವಿದ್ಯಾರ್ಥಿಗಳ ವಿರುದ್ಧ ದೇಶ ದ್ರೋಹದ ಹಿನ್ನಲೆಯಲ್ಲಿ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಲೇಜು ಪ್ರಾಂಶುಪಾಲರಾದ ಬಸವರಾಜ ಅನಾಮಿ, ಪೊಲೀಸ್​ ಇಲಾಖೆಗೆ ಮಾಹಿತಿ ನೀಡಿದ್ದೇವೆ ವಿದ್ಯಾರ್ಥಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದರು. ಈ ಪ್ರಕರಣ ವಿರುದ್ಧ ಎಲ್ಲೆಡೆ ಆಕ್ರೋ ವ್ಯಕ್ತವಾಗುತ್ತಿದೆ.(ದಿಗ್ವಿಜಯ ನ್ಯೂಸ್​)
https://www.facebook.com/powernewzapp/videos/2722084368012782/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 4 =
Remember me
