ಮದುಗಿರಿ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು ಓರ್ವ ತೀವ್ರ ಗಾಯಗೊಂಡು ಆಸ್ಪತ್ರೆ ದಾಖಲಾಗಿರುವ ಘಟನೆ ತಾಲೂಕಿನ ಮಿಡಿಗೇಶಿ ಕೆಶಿಪ್ ರಸ್ತೆಯಲ್ಲಿ ರಾತ್ರಿ ನಡೆದಿದೆ.
ಪಾವಗಡ ತಾಲೂಕಿನ ಗುಜ್ಜ ನುಡು ಗ್ರಾಮದ ಆಕಾಶ್, ಕಾರ್ತಿಕ್, ಹೇಮಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಜ್ವಲ್ ತೀವ್ರ ಗಾಯಗೊಂಡು ತುಮಕೂರು ಆಸ್ಪತ್ರೆಗೆ ದಾಖಲಾಗಿದ್ದಾರೆ
ಇಂದು ಬೆಂಗಳೂರು ಬಂದ್ ಇದ್ದ ಕಾರಣ ಗ್ರಾಮದಲ್ಲಿ ನಡೆಯುತ್ತಿದ್ದ ಮಾರಮ್ಮ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ಮಿಡಿಗೇಶಿ ಬಳಿ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದ ಮುಂಭಾಗದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ನಟ ವಿಜಯ್​ ಆಂಟೋನಿ ಮಗಳು ಸಾವು ಪ್ರಕರಣ: ಆಘಾತಕಾರಿ​ ಮಾಹಿತಿ ಬಿಚ್ಚಿಟ್ಟ ಖ್ಯಾತ ಮನೋವೈದ್ಯ
ಮೃತರ ದೇಹಗಳನ್ನು ಮದುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆಗೆ ತರಲಾಗಿದ್ದು ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇನು ಕನ್ನಡಿಗರ ಸರ್ಕಾರವೋ, ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ: ಮಾಜಿ ಸಿಎಂ ಎಚ್​ಡಿಕೆ ವಾಗ್ದಾಳಿ

ನಟ ವಿಜಯ್​ ಆಂಟೋನಿ ಮಗಳು ಸಾವು ಪ್ರಕರಣ: ಆಘಾತಕಾರಿ​ ಮಾಹಿತಿ ಬಿಚ್ಚಿಟ್ಟ ಖ್ಯಾತ ಮನೋವೈದ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
