ದಾವಣಗೆರೆ:ಕಾರು ಹಾಗೂ ಕೆಎಸ್​​ಆರ್​ಟಿಸಿ ಬಸ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ನಡೆದಿದೆ.
ಮೃತ ದುರ್ದೈವಿಗಳನ್ನು ಸೂರಗೊಂಡನಕೊಪ್ಪ ನಿವಾಸಿಗಳಾದ ದೇವರಾಜ್(27), ರಾಕೇಶ್(30) ಹಾಗೂ ಹರಮಘಟ್ಟ ಗ್ರಾಮದ ನಂಜುಂಡಪ್ಪ(83) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಆರಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ನ್ಯಾಮತಿ ಪೊಲೀಸರು ಓಮಿನಿ ಕಾರಿನಲ್ಲಿ ಸೂರಗೊಂಡನಕೊಪ್ಪದಿಂದ ಶಿಕಾರಿಪುರದತ್ತ ತೆರಳುತ್ತಿದ್ದ ವೇಳೆ ಶಿವಮೊಗ್ಗದತ್ತ ತೆರಳುತ್ತಿದ್ದಕಡೆ ಹೊರಟಿದ್ದ ಬಸ್​ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ನ್ಯಾಮತಿ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 10 =
Remember me
