ಬಳ್ಳಾರಿ:ನೀರಿನ ಹೊಂಡದಲ್ಲಿ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ತೋರಣಗಲ್ಲು‌ ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿ ನಡೆದಿದೆ.
ಮೃತರನ್ನು ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್ ಎಂದು ಗುರುತಿಸಲಾಗಿದೆ. ತೋರಣಗಲ್ಲು‌ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ನೀರಿನ ಹೊಂಡಕ್ಕೆ ಜೋಡಿಸಲಾಗಿದ್ದ ಪೈಪ್​ನಲ್ಲಿ ಸಮಸ್ಯೆ ಕಂಡು ಬಂದಿತ್ತು. ಪೈಪ್​ ರಿಪೇರಿ ಮಾಡಲು ಮೂವರು ಹೋಗಿದ್ದಾರೆ. ಪೈಪ್​ನಲ್ಲಿ ಬರುತ್ತಿದ್ದ ನೀರನ್ನು ನಿಲ್ಲಿಸದೆ ಹಾಗೆ ದುರಸ್ತಿ ಕಾರ್ಯ ಮಾಡುವಾಗ, ನೀರಿನ ರಭಸಕ್ಕೆ ಚನ್ನೈ ಮೂಲದ ಮಹಾದೇವನ್​​ ನೀರಿನ ಹೊಂಡದಲ್ಲಿ ಬಿದ್ದಿದ್ದಾನೆ. ಈತನನ್ನು ರಕ್ಷಿಸಲು ಹೋಗಿ ಇನ್ನಿಬ್ಬರೂ ಕೂಡ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಕೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
