ಬೆಂಗಳೂರು:ಶಾಸಕ ಸತೀಶ್​ ರೆಡ್ಡಿಯವರ ಮನೆಯಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ ಇಟ್ಟು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನೇಪಾಳ ಮೂಲದ ಸಾಗರ್​ ತಾಪ, ಶ್ರೀಧರ್ ಗೌಡ ಹಾಗೂ ನವೀನ್ ಕಾಳಪ್ಪ ಬಂಧಿತರು.ಆರೋಪಿಗಳು.
ಮೂವರೂ ಆರೋಪಿಗಳು ಮದ್ಯಪಾನ ಮಾಡಿಹೋಗಿ ಈ ಕೃತ್ಯ ಎಸಗಿದ್ದು, ಆ ಬಳಿಕವೂ ಇವರು ಬೆಂಗಳೂರಿನಲ್ಲೇ ಇದ್ದರು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಮೂವರೂ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಶಾಸಕ ಸತೀಶ್​ ರೆಡ್ಡಿ ಈ ಭಾಗದಲ್ಲಿ ಶ್ರೀಮಂತ ಎಂಬ ಒಂದೇ ಕಾರಣಕ್ಕೆ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ಶ್ರೀಮಂತರೇ ಶ್ರೀಮಂತರಾಗುತ್ತಾ ಇದ್ದಾರೆ, ಬಡವರು ಬಡವರಾಗಿಯೇ ಇದ್ದಾರೆ ಎಂದು ಆರೋಪಿಗಳು ಹೀಗೆ ಮಾಡಿದ್ದು, ಶಾಸಕರಿಗೂ ಆರೋಪಿಗಳಿಗೂ ಯಾವುದೇ ಸಂಬಂಧವಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಮಧ್ಯರಾತ್ರಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ​ ಮನೆಗೆ ನುಗ್ಗಿ ಎರಡು ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು..!
ಆರೋಪಿಗಳಲ್ಲಿ ಇಬ್ಬರನ್ನು ಗಾರ್ವೇಬಾವಿಪಾಳ್ಯ ಬಳಿ ಬಂಧಿಸಿರುವ ಪೊಲೀಸರು ಮತ್ತೊಬ್ಬನನ್ನು ಬಂಡೇಪಾಳ್ಯದ ಸ್ಮಶಾನದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಕಾರುಗಳಿಗೆ ಬೆಂಕಿ ಹಚ್ಚಿ ಓಡಿಹೋಗುತ್ತಿರುವುದು, ಅದರಲ್ಲಿ ಒಬ್ಬ ಕುಂಟುತ್ತಿರುವುದು ಸಿಸಿಟಿವಿ ಕ್ಯಾಮರಾ ಕ್ಲಿಪ್ಪಿಂಗ್​ನಲ್ಲಿ ಸೆರೆಯಾಗಿತ್ತು.
ಪ್ಲಾಸ್ಟಿಕ್​ ಕಪ್​, ಪ್ಲೇಟ್​, ಸ್ಟ್ರಾಗಳ ಉತ್ಪಾದನೆಯೇ ಬಂದ್​; ಸರ್ಕಾರದಿಂದ ಘೋಷಣೆ

ಭಾರತದಲ್ಲಿ ಪ್ರತಿನಿತ್ಯ 1,157 ಮಹಿಳೆಯರು ನಾಪತ್ತೆ!; ದೇಶದಲ್ಲಿ ಹೆಚ್ಚಾಗಿದೆ ಸ್ತ್ರೀಯರ ಮಿಸ್ಸಿಂಗ್​ ಕೇಸ್​..

ನಾನು ಆರ್​ಎಸ್​ಎಸ್​ ಸ್ವಯಂಸೇವಕ, ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ: ಸಿ.ಟಿ. ರವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − seven =
Remember me
