ಬೀದರ್:ರಾಜ್ಯದಲ್ಲಿ ಇಂದು ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಯುವ ಕಾಂಗ್ರೆಸ್​ಗೆ ಸೇರಿದ ಜೀಪೊಂದು ಪಲ್ಟಿಯಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಾಯಗೊಂಡ ಬೆನ್ನಿಗೆ ಮತ್ತೊಂದು ಅಪಘಾತ ಸಂಭವಿಸಿದೆ. ಇಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ್ ಬಳಿ ಈ ಅಪಘಾತ ಸಂಭವಿಸಿದೆ. ಕ್ರೂಸರ್ ವಾಹನ ಮತ್ತು ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಉಂಟಾಗಿದ್ದು, ಕ್ರೂಸರ್ ಬಹುತೇಕ ಜಖಂಗೊಂಡಿದೆ. ಸಾವಿಗೀಡಾದ ಇಬ್ಬರೂ ಕ್ರೂಸರ್​​ನಲ್ಲಿದ್ದವರು.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಸಂತಪೂರ್​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಔರಾದ್ ತಾಲೂಕಿನ ಹೋಕ್ರಾಣ ಗ್ರಾಮದ ದೀಪಕ ಕಸ್ತೂರೆ (60), ಸತ್ಯವಾನ ದಬಾಕ (25) ಮೃತಪಟ್ಟವರು. ಮೃತಪಟ್ಟವರು ಹಾಗೂ ಗಾಯಾಳುಗಳ ಕುರಿತ ಖಚಿತ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಯುವ ಕಾಂಗ್ರೆಸ್ ಜೀಪ್ ಪಲ್ಟಿ; ಒಬ್ಬ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ..

6 ತಿಂಗಳಿನಿಂದ ಪದೇಪದೆ ಅತ್ಯಾಚಾರ; ಕಾಮುಕನನ್ನು ಕೊಂದ ಬಾಲಕಿ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − one =
Remember me
