ಮಂಡ್ಯ:ಕಾರು ಮತ್ತು ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಈ ಭೀಕರ ಅವಘಡ ಸಂಭವಿಸಿದೆ.
ಮಂಡ್ಯ ಜಿಲ್ಲೆ ನಾಗಮಂಗಲದ ಹೊಸೂರು ಗೇಟ್ ಬಳಿ ಕಾರು ಮತ್ತು ಲಾರಿ ಡಿಕ್ಕಿಯಾಗಿವೆ. ದೇವರಾಜು ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಪಂ ಗ್ರಾಮಲೆಕ್ಕಿಗ ದೇವರಾಜು, ಪಾಂಡವಪುರ ತಾಲೂಕಿನ‌ ಕೆನ್ನಾಳು ಗ್ರಾಪಂ ಗ್ರಾಮ ಸಹಾಯಕ ಮಂಜುನಾಥ್ ಹಾಗೂ ಇನ್ನೊಬ್ಬರು ಸಾವಿಗೀಡಾಗಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.
ದೇವರಾಜು ಜಮೀನು ಕೆಲಸದ ನಿಮಿತ್ತ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳಿದ್ದರು. ವಾಪಸ್ ಬರುವಾಗ ಮೈಸೂರಿನಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಗಾಯಗೊಂಡಿರುವ ವ್ಯಕ್ತಿಯನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗಮಂಗಲ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಕಾರಿನ ಗಾಜನ್ನು ಒರೆಸುತ್ತ ಫಾಸ್ಟ್ಯಾಗ್ ಹಣ ಕಬಳಿಸುವವರ ಹಾವಳಿ?; ಹೊರಬಿತ್ತು ಅಸಲಿಯತ್ತು…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
