ಬೆಳಗಾವಿ:ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಮನೆಯಲ್ಲಿದ್ದವರಿಗೆ ಪಿಸ್ತೂಲ್ ತೋರಿಸಿ, ಬೆದರಿಸಿ 1.5 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿರವುದು ಬೆಳಕಿಗೆ ಬಂದಿದೆ.
ಹೊನಗಾ ಗ್ರಾಮದ ಎನ್‌ಎಚ್ 4ರ ಸರ್ವಿಸ್ ರಸ್ತೆಯ ಪಕ್ಕದಲ್ಲಿರುವ ಪ್ರವೀಣ ನಿರಂಜನ್ ಎಂಬುವರ ಮನೆಯಲ್ಲಿ ದರೋಡೆ ನಡೆದಿದೆ. ಪ್ರವೀಣ ಪ್ಲಾಸ್ಟಿಕ್ ಕಾರ್ಖಾನೆಯನ್ನು ಹೊಂದಿದ್ದಾರೆ ಮತ್ತು ಅವರ ಕಾರ್ಖಾನೆಯ ಕಟ್ಟಡದ ಮೊದಲ ಮಹಡಿಯಲ್ಲಿ ವಾಸವಾಗಿದ್ದಾರೆ. ಮೂವರು ದರೋಡೆಕೋರರ ತಂಡವು ಮುಖಕ್ಕೆ ಮಾಸ್ಕ್ ಹಾಕಿಕೊಂಡು ನುಗ್ಗಿದ್ದು, ಇಬ್ಬರು ಪಿಸ್ತೂಲ್, ಕುಡುಗೋಲು ಹಿಡಿದುಕೊಂಡು ಬೆದರಿಸಿ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ನೀಡುವಂತೆ ಹೇಳಿದ್ದಾರೆ.
ಪ್ರಾಣಭಯದಿಂದ ನಿರಂಜನ್ ಖಜಾನೆ ತೆರೆದು 1.5 ಲಕ್ಷ ರೂ. ನಗದು ಹಣವನ್ನು ದರೋಡೆಕೋರರಿಗೆ ನೀಡಿದ್ದರು. ಹಣ ಪಡೆದು ಮನೆಯಿಂದ ಯಾರಿಗೂ ತೊಂದರೆ ಮಾಡದೆ ಕಳ್ಳರು ಪರಾರಿಯಾಗಿದ್ದಾರೆ. ಕಾಕತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಪ್ರಧಾನಿ ಮೋದಿಯ ಫೋಟೋ ಇಟ್ಟರೆ ನಿನ್ನನ್ನೇ ಮನೆಯಿಂದ ಹೊರಹಾಕುವೆ ಎಂದ ಮಾಲೀಕ!

ಪಕ್ಕದ್ಮನೆ ಮಗುವನ್ನು ಕೊಲೆ ಮಾಡಿದ್ದವ ತನ್ನ ತಾನೇ ಕೊಂದುಕೊಂಡ; ಜೈಲಲ್ಲೇ ಆತ್ಮಹತ್ಯೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − two =
Remember me
