ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಮನೆಗೆ ಹೊಕ್ಕು ಪಿಸ್ತೂಲ್ ತೋರಿಸಿ ದರೋಡೆಗೆ ಯತ್ನಿಸಿದ ಪ್ರಕರಣ ವರದಿಯಾಗಿದೆ. ಮೂವರು ಅಪರಿಚಿತರು ಈ ದುಷ್ಕೃತ್ಯ ಎಸಗಿದ್ದು, ಆ ಪೈಕಿ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಮತ್ತಿಕೆರೆಯ ಬಾಂಬೆ ಡೈಯಿಂಗ್ ರಸ್ತೆಯಲ್ಲಿನ ಮನೆಯೊಂದರಲ್ಲಿ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮನೆಯಲ್ಲಿ ಇಬ್ಬರು ವೃದ್ಧೆಯರು ಮತ್ತು ಒಬ್ಬಳು ಯುವತಿ ಮಾತ್ರ ಇರುವುದನ್ನು ಗಮನಿಸಿ ಈ ದುಷ್ಕೃತ್ಯ ಎಸಗಿದ್ದಾರೆ.
ಇದನ್ನೂ ಓದಿ:52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ಸಂದೇಶವಿದು..
ಮನೆಗೆ ನುಗ್ಗಿ ಪಿಸ್ತೂಲ್ ತೋರಿಸಿ ಬೆದರಿಸಿದ ಆರೋಪಿಗಳು ಮನೆಯಲ್ಲಿದ್ದ ಎರಡು ಜುವೆಲ್ಲರಿ ಬಾಕ್ಸ್​ಗಳನ್ನು ದೋಚಿಕೊಂಡು ಪರಾರಿಯಾಗಲು ಯತ್ನಿಸಿದ್ದರು. ಆದರೆ ಅಷ್ಟರಲ್ಲಿ ಸುತ್ತುವರಿದ ಸಾರ್ವಜನಿಕರು ಆರೋಪಿಗಳಲ್ಲಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ:ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಬಸ್​, ಮಹಿಳೆ ಸ್ಥಳದಲ್ಲೇ ಸಾವು, ಐವರಿಗೆ ಗಾಯ..
ಬಂಗಾಳದ ಮೂವರು ಆರೋಪಿಗಳು ಈ ಕೃತ್ಯವೆಸಗಿದ್ದು, ಆ ಪೈಕಿ ಒಬ್ಬನನ್ನು ವಶಕ್ಕೆ ಪಡೆದಿರುವ ಪೊಲೀಸರು, ಆರೋಪಿಗಳು ದೋಚಿದ್ದ ಜುವೆಲ್ಲರಿ ಬಾಕ್ಸ್​ಗಳನ್ನೂ ವಶಕ್ಕೆ ಪಡೆದಿದ್ದಾರೆ. ಮತ್ತಿಬ್ಬರ ಪತ್ತೆಗೆ ಬಲೆ ಬೀಸಿದ್ದಾರೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಡನ ಕತ್ತನ್ನು ಕತ್ತರಿಸಿದ ಹೆಂಡತಿ; ರುಂಡ ಚೀಲದಲ್ಲಿರಿಸಿ ದೇವಸ್ಥಾನದಲ್ಲಿಟ್ಟಳು!
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:18 + 6 =
Remember me
