ಹಾವೇರಿ:ಮೆಕ್ಕೆಜೋಳ ತುಂಬಿದ ಲಾರಿ ಪಲ್ಟಿಯಾಗಿದ್ದು, ಅದರಲ್ಲಿದ್ದ ಮೂವರು ಉಸಿರುಗಟ್ಟಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಾವೇರಿ ತಾಲೂಕಿನ ಹೋಸರಿತ್ತಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.
ಲಾರಿಯಲ್ಲಿದ್ದ ಆನಂದ (35), ಮಂಜು (37), ಆನಂದ (33) ಮೃತಪಟ್ಟವರು. ಮೆಕ್ಕೆಜೋಳ ತುಂಬಿದ್ದ ಲಾರಿ ಇಚ್ಚಂಗಿಯಿಂದ ಹೋಸರಿತ್ತಿಗೆ ಹೋಗುವಾಗ ಈ ಅವಘಡ ಸಂಭವಿಸಿದೆ. ಈ ವಾಹನ ಮಾರುಕಟ್ಟೆಗೆ ತೆರಳುತ್ತಿದ್ದು, ಮೃತಪಟ್ಟವರೆಲ್ಲರೂ ಹಮಾಲಿಗಳು.
ಇದನ್ನೂ ಓದಿ:ವಿದ್ಯಾರ್ಥಿಗಳ ಎಡವಟ್ಟು; ಅಂಕಪಟ್ಟಿಯಲ್ಲಿ ಹೆಚ್ಚು ಅಂಕ ಕೊಟ್ಟ ವಿಶ್ವವಿದ್ಯಾಲಯ!
ಮಾರ್ಗಮಧ್ಯೆ ಅಪಘಾತಕ್ಕೀಡಾದ ಲಾರಿ ಪಲ್ಟಿಯಾಗಿದೆ. ಆಗ ಲಾರಿಯಲ್ಲಿದ್ದ ಜೋಳದ ರಾಶಿಯೊಳಗೆ ಈ ಹಮಾಲಿಗಳು ಸಿಲುಕಿ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಬಳಿಕ ಜೆಸಿಬಿ ಮೂಲಕ ಲಾರಿಯನ್ನು ಎತ್ತಿ ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಇದನ್ನೂ ಓದಿ:ಶಿವರಾಜಕುಮಾರ್​ಗೆ ‘ಬುದ್ಧಿವಂತ’ ನಿರ್ದೇಶಕನ ನಿರ್ದೇಶನ; ಬರಲಿದೆ ಪ್ಯಾನ್ ಇಂಡಿಯಾ ಸಿನಿಮಾ…
ಸಾವಿಗೀಡಾದ ಹಮಾಲಿಗಳು ಯಾವ ಊರಿನವರು ಎಂಬುದು ಇನ್ನಷ್ಟೇ ಖಚಿತವಾಗಬೇಕಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ನಾಯಕರಾಗಿ ಚಿತ್ರರಂಗಕ್ಕೆ ಬಂದ ಅಶ್ವತ್ಥ್​ ಕೆಲವೇ ವರ್ಷಗಳಲ್ಲಿ ಪೋಷಕ ನಟ ಆಗಿದ್ಯಾಕೆ? ಏನದು ರಹಸ್ಯ!?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 4 =
Remember me
