ಬೆಂಗಳೂರು:ಮಹಿಳೆಯರನ್ನು ಹಿಂಬಾಲಿಸಿ ಸರಗಳವು ಮಾಡುತ್ತಿದ್ದ ಇಬ್ಬರು ಕುಖ್ಯಾತ ರೌಡಿಶೀಟರ್‌ಗಳು ಸೇರಿ ಮೂವರು ಆರೋಪಿಗಳನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಾರಾಯಿಪಾಳ್ಯ ನಿವಾಸಿಗಳಾದ ಅಬ್ರಹಾರ್(34), ಅಫ್ತಾಬ್(34) ಹಾಗೂ ಅಫ್ಸರ್(26) ಬಂಧಿತರು. ಆರೋಪಿಗಳಿಂದ 90 ಸಾವಿರ ರೂ. ಮೌಲ್ಯದ 20 ಗ್ರಾಂ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನ, ಎರಡು ತಲ್ವಾರ್ ವಶ ಪಡಿಸಿಕೊಳ್ಳಲಾಗಿದೆ.
ಕಳೆದ ಡಿ.14ರಂದು ಸಂಜೀವಿನಿ ನಗರದ 8ನೇ ಕ್ರಾಸ್‌ನಲ್ಲಿ ಮಹಿಳೆಯೊಬ್ಬರು ಮಗನೊಂದಿಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯ 20 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
25ಕ್ಕೂ ಅಧಿಕ ಪ್ರಕರಣ ದಾಖಲು:ಬಂಧಿತ ಮೂವರು ಆರೋಪಿಗಳ ಪೈಕಿ ಅಬ್ರಹಾರ್ ಕೆ.ಜಿ.ಹಳ್ಳಿ ಹಾಗೂ ನಂದಿನಿ ಲೇಔಟ್ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಮತ್ತೊಬ್ಬ ಆರೋಪಿ ಅಫ್ತಾಬ್ ರಾಜಗೋಪಾಲನಗರ ಠಾಣೆ ರೌಡಿಶೀಟರ್ ಆಗಿದ್ದಾನೆ. ಮೂರನೇ ಆರೋಪಿ ಅಫ್ಸರ್, ಈ ಇಬ್ಬರು ಆರೋಪಿಗಳು ಕದ್ದು ತರುವ ಮಾಲುಗಳನ್ನು ವಿಲೇವಾರಿ ಮಾಡುತ್ತಿದ್ದ. ವೃತ್ತಿಪರ ಅಪರಾಧ ಹಿನ್ನೆಲೆಯಲ್ಲಿ ರೌಡಿಶೀಟರ್‌ಗಳ ವಿರುದ್ಧ ಈ ಹಿಂದೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಲಿಗೆ, ದರೋಡೆ, ಸರ ಅಪಹರಣ, ಕೊಲೆ, ಕೊಲೆಗೆ ಯತ್ನ ಸೇರಿ 25ಕ್ಕೂ ಅಧಿಕ ಅಪರಾಧ ಪ್ರಕರಣಗಳು ದಾಖಲಾಗಿವೆ. ಹಲವು ಪ್ರಕರಣಗಳಲ್ಲಿ ಜೈಲು ಸೇರಿದ್ದ ಆರೋಪಿಗಳು ಜಾಮೀನು ಪಡೆದು ಹೊರಬಂದ ನಂತರವೂ ತಮ್ಮ ಹಳೇ ಚಾಳಿ ಮುಂದುವರಿಸಿದ್ದರು.
ಈ ಆರೋಪಿಗಳ ಬಂಧನದಿಂದ ರಾಜಗೋಪಾಲನಗರ, ಬ್ಯಾಡರಹಳ್ಳಿ, ಶಿವಾಜಿನಗರ, ಕುಮಾರಸ್ವಾಮಿ ಲೇಔಟ್, ಬಾಗಲೂರು, ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ದಾಖಲಾಗಿದ್ದ ತಲಾ ಒಂದು ಸೇರಿ ಆರು ಸುಲಿಗೆ ಪ್ರಕರಣಗಳು ಹಾಗೂ ಗಂಗಮ್ಮನಗುಡಿ ಠಾಣೆಯಲ್ಲಿ ಕೊಲೆ ಬೆದರಿಕೆ, ಕೆ.ಜಿ.ಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಒಂದು ದ್ವಿಚಕ್ರವಾಹನ ಕಳವು ಪ್ರಕರಣ ಸೇರಿ ಎಂಟು ಅಪರಾಧ ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ನಾ ನಾಯಕಿ’ ಸಮಾವೇಶಕ್ಕೆ ಖಡಕ್​ ಎಂಟ್ರಿ ಕೊಟ್ಟ ಪ್ರಿಯಾಂಕಾ! ವಿಶೇಷ ಯೋಜನೆ ಘೋಷಿಸುತ್ತಲೇ ರಾಜಕೀಯದಲ್ಲಿ ಸ್ತ್ರೀಶಕ್ತಿಯ ಮಹತ್ವ ಸಾರಿದ ನಾಯಕಿ

ಲಾಲ್​ಬಾಗ್​ನಲ್ಲಿ ಜ.20ರಿಂದ ಫಲಪುಷ್ಪ ಪ್ರದರ್ಶನ: ಹೂವಿನಲ್ಲಿ ಅರಳಲಿದೆ ಬೆಂಗಳೂರು ಇತಿಹಾಸ

9ನೇ ತರಗತಿ ವಿದ್ಯಾರ್ಥಿನಿ ಜತೆ ಬೆಳಗಾವಿಯಲ್ಲಿ ಶಿಕ್ಷಕನ ಪ್ರೇಮದಾಟ: ಖಾಸಗಿ ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 20 =
Remember me
