ಕೊಡಗು:ಅಸಲಿ‌ ಚಿನ್ನ ಕದ್ದು‌ ಅದೇ ಜಾಗಕ್ಕೆ ನಕಲಿ ಚಿನ್ನವಿಟ್ಟು ಚಿನ್ನದ ಅಂಗಡಿಗೆ ವಂಚಿಸಿದ ಮೂವರ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್‌ಗೆ ಶ್ರೀಲಂಕಾದಲ್ಲಿ ಹೃದಯಾಘಾತ; ಶೀಘ್ರದಲ್ಲೇ ನಾರಾಯಣ ಹೃದಯಾಲಯಕ್ಕೆ ಶಿಫ್ಟ್​
ಕೈರುನ್(46), ಜೈರಾಭಿ(36),ಮತ್ತೊಬ್ಬ ಯುವಕ ಬಂಧಿತರು. ಆರೋಪಿಗಳು ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಪಾಮರಹಳ್ಳಿ ನಿವಾಸಿಗಳಾಗಿದ್ದಾರೆ.ಕೊಡಗು ಜಿಲ್ಲೆಯ ಕುಶಾಲನಗರದ ರಥಬೀದಿಯ ಶೀತಲ್ ಜ್ಯುವೆಲರಿ ಅಂಗಡಿಯಲ್ಲಿ ಇಬ್ಬರು ಬುರ್ಖಾಧಾರಿ ಸೇರಿದಂತೆ ಮೂವರ ಚಿನ್ನ ಕದ್ದು, ಅದೇ ಜಾಗದಲ್ಲಿ ನಕಲಿ ಚಿನ್ನವಿಟ್ಟು ಖದೀಮರು ಪರಾರಿಯಾಗಿದ್ದರು.
ಇದನ್ನೂ ಓದಿ:ಅನ್ನಭಾಗ್ಯ ಮಾರ್ಗಸೂಚಿ; ಮೂರು ತಿಂಗಳು ಪಡಿತರ ಪಡೆದಿದ್ದರೆ ಮಾತ್ರವೇ ನಗದು ಭಾಗ್ಯ
ಬುರ್ಖಾ ಧರಿಸಿದ್ದ ಆರೋಪಿಗಳೊಂದಿಗೆ ಓರ್ವ ಯುವಕ ಸಹ ಇದ್ದ. ಯುವಕ ವ್ಯಾಪಾರಿಯನ್ನು ಮಾತನಾಡಿಸುತ್ತಾ ಗಮನ ಬೇರೆಡೆ ಸೆಳೆದಿದ್ದ. ಈ ವೇಳೆ ಮಹಿಳೆಯರು ಸುಮಾರು 22.4 ಗ್ರಾಂ ಚಿನ್ನವನ್ನು ಕಳ್ಳತನ ಮಾಡಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಕೊಡಗು ಪೊಲೀಸರು ತಿಂಗಳ ಬಳಿಕ ಪ್ರಕರಣವನ್ನು ಭೇದಿಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 22 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
VIDEO | ಜೇನುತುಪ್ಪದ ಶುದ್ಧತೆಯನ್ನು ಪರೀಕ್ಷಿಸಲು ವ್ಯಾಪಾರಿ ಮಾಡಿದ್ದೇನು?ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 3 =
Remember me
