ಉತ್ತರಕನ್ನಡ:ಭೀಕರ ಅಪಘಾತವೊಂದರಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ರಾಮನಗರದಲ್ಲಿ ಈ ಅಪಘಾತ ಸಂಭವಿಸಿದೆ.
ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಸೀತಾವಾಡದಲ್ಲಿ ಈ ಅಪಘಾತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಖಾನಾಪುರದ ಫಾರ್ಲಿಯ ಪಾರ್ವತಿ ಗಾವಡಾ, ದುರ್ಗೆ ಕೋಲ್ಸೇಕರ್, ತುಳಸಿ ಗಾವಡ ಸಾವಿಗೀಡಾದವರು. ವಿಪಿನ ತಾಳ್ವೆ ಎಂಬಾಕೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇವರು ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತಿದ್ದಾಗ ಈ ಅಪಘಾತ ಸಂಭವಿಸಿದೆ. ಹಿಂಭಾಗದಿಂದ ವೇಗವಾಗಿ ಬಂದ ಮಹಿಂದ್ರ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಈ ವಾಹನ ತಮಿಳುನಾಡಿನಿಂದ ಗೋವಾಕ್ಕೆ ತೆರಳುತಿದ್ದು, ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಮೇಲಿನ ಮನೆಯ ಶೋಯಬ್, ಕೆಳಗಿನ ಮನೆಯ ಶಾಜಿಯಾ ಒಂದೇ ದಿನ ಗಾಯಬ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
