ಬೆಂಗಳೂರು:ಮೂವರು ಯುವಕರು ರೈಲಿಗೆ ಸಿಲುಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ. ಮೃತರು ಆಂಧ್ರಪ್ರದೇಶ ಮೂಲದವರು ಎಂದು ತಿಳಿದು ಬಂದಿದೆ.
ಮೃತರನ್ನು ಶಶಿಕುಮಾರ್​, ಲೋಕಿ ಎಂದು ಗುರುತಿಸಲಾಗಿದ್ದು, ಇವರು 25 ವರ್ಷ ಆಸುಪಾಸಿನವರು ಎಂದು ತಿಳಿದು ಬಂದಿದೆ. ಇನ್ನೋರ್ವನ ಗುರುತು ಪತ್ತೆಯಾಗದ ಕಾರಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಶ್ರೀಲಂಕಾದಿಂದ ಭಾರತಕ್ಕೆ ಈಜುವ ವೇಳೆ ಹೃದಯಾಘಾತ; ಬೆಂಗಳೂರು ಮೂಲದ ವ್ಯಕ್ತಿ ನಿಧನ
ಈ ಕುರಿತು ಪ್ರತಿಕ್ರಿಯಿಸಿರುವ ರೈಲ್ವೆ ಎಎಸ್​ಪಿ ಡಾ. ಸೌಮ್ಯಲತಾ, ಗುರುವಾರ (ಏಪ್ರಿಲ್ 25) ಮುಂಜಾನೆ ಸ್ಥಳೀಯರು ಮೃತದೇಹಗಳನ್ನು ನೋಡಿ ಪೊಲೀಸರಿಗೆ ತಕ್ಷಣವೇ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಛಿದ್ರವಾಗಿದ್ದ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಬುಧವಾರ ರಾತ್ರಿ 8:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಯಶವಂತಪುರ ಕಣ್ಣೂರು ಎಕ್ಸ್ಪ್ರೆಸ್ ರೈಲು ಪಾಸ್ ಆಗುವ ವೇಳೆ ಅಡ್ಡಬಂದಿದ್ದಾರೆ. ಮಾರತ್ತಹಳ್ಳಿ ಬ್ರಿಡ್ಜ್ ಪಕ್ಕದಲ್ಲಿ ಈ ಘಟನೆ ನಡೆದಿದೆ. ಶಶಿಕುಮಾರ್ ಲೋಕೇಶ್ ಸೇರಿ ಮೂವರು ಮೃತರಾಗಿದ್ದಾರೆ. ಮೃತ ಮೂವರು ಆಂಧ್ರಪ್ರದೇಶದ ಚಿತ್ತೂರಿನವರು ಎಂದು ತಿಳಿದು ಬಂದಿದೆ. ಮೂವರು ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿದ್ದರು ಎಂದು ತಿಳಿದು ಬಂದಿರುವುದಾಗಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 9 =
Remember me
