ಬೆಂಗಳೂರು:‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ 2023 ನ.1 ರಿಂದ 2024 ನ.1ರವರೆಗೆ ಕರ್ನಾಟಕ ಸಂಭ್ರಮ ಆಚರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ದೇಶೀ ಕ್ರೀಡೆಗಳನ್ನು ಹಮ್ಮಿಕೊಳ್ಳಬೇಕು. ಕರ್ನಾಟಕದ ಸಂಸ್ಕೃತಿ ಹೆಚ್ಚು ಬಿಂಬಿಸಬೇಕು, ಕನ್ನಡ ನಾಡು, ಸಂಸ್ಕೃತಿ ಮತ್ತು ಪ್ರಾದೇಶಿಕ ಭವ್ಯತೆಯನ್ನು ಈ ಸಂದರ್ಭದಲ್ಲಿ ಯುವ ಪೀಳಿಗೆಗೂ ಮುಟ್ಟಿಸುವ ರೀತಿ ಅರ್ಥಪೂರ್ಣ ಮತ್ತು ಸಂಭ್ರಮದ ಕಾರ್ಯಕ್ರಮ ಆಯೋಜಿಸಿ ಎಂದು ನಿರ್ದೇಶನ ನೀಡಿದರು. ನಾಡಿನ ಸಾಹಿತಿಗಳೊಂದಿಗೆ ಈ ಬಗ್ಗೆ ರ್ಚಚಿಸಿ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ಸ್ಮಾರಕ ಅಭಿವೃದ್ಧಿ , ಜೀರ್ಣೋದ್ಧಾರ:ವಿಧಾನಸೌಧ ಹಾಗೂ ಶಾಸಕರ ಭವನದ ಮಧ್ಯೆ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸುವುದು, ಮೈಸೂರಿನಲ್ಲಿ ದೇವರಾಜ ಅರಸರ ಪ್ರತಿಮೆ ಸ್ಥಾಪನೆ, ಧಾರವಾಡದ ಅದರಗುಂಚಿ ಶಂಕರಗೌಡ, ಬಳ್ಳಾರಿಯ ಹುತಾತ್ಮ ರಂಜಾನ್ ಸಾಬ್ ಹಾಗೂ ಗದಗ ಜಿಲ್ಲೆಯ ಅಂದಾನಪ್ಪ ದೊಡ್ಡಮೇಟಿ ಅವರ ಸ್ಮಾರಕ ಅಭಿವೃದ್ಧಿ, ಜೀಣೋದ್ಧಾರ ಕಾರ್ಯ ಹಮ್ಮಿಕೊಳ್ಳುವುದು ಸೇರಿ ಹಲವು ಕಾರ್ಯಕ್ರಮ ರೂಪಿಸಲು ಸಭೆಯಲ್ಲಿ ತೀರ್ವನಿಸಲಾಯಿತು.
17ರಂದು ಲಾಂಛನ ಬಿಡುಗಡೆ:ಕರ್ನಾಟಕ ಸಂಭ್ರಮ-50ರ ಲಾಂಛನವನ್ನು ಅ.17ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಯಿತು. ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ, ಲೇಸರ್ ಶೋ/ಧ್ವನಿ, ಬೆಳಕು ಕಾರ್ಯಕ್ರಮ, ಕರ್ನಾಟಕಕ್ಕೆ ಕೊಡುಗೆ ನೀಡಿದ 50 ಮಹಿಳೆಯರಿಗೆ ಪ್ರಶಸ್ತಿ ನೀಡಲು ಸಭೆ ನಿರ್ಧರಿಸಿತು.
ಹಿಂದಿನ ಸರ್ಕಾರದ ನಿರ್ಲಕ್ಷ್ಯ ಸಲ್ಲ:ಐವತ್ತನೇ ವರ್ಷದ ಸಂಭ್ರಮವನ್ನು ಹಿಂದಿನ ಸರ್ಕಾರ 2022 ನ.1 ರಿಂದ 2023 ನ.1ರವರೆಗೆ ವೈಭವದಿಂದ ಆಚರಿಸಬೇಕಿತ್ತು. ಏಕೆ ಆಚರಿಸಲಿಲ್ಲ? ಈ ನಿರ್ಲಕ್ಷ್ಯ ಸರಿನಾ? ಎಂದು ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಈಗ 50 ವರ್ಷ ತುಂಬಿ 51ನೇ ವರ್ಷಕ್ಕೆ ಕಾಲಿಡಲಿದ್ದು, ಹಿಂದಿನ ಸರ್ಕಾರ ಈ ವಿಚಾರದಲ್ಲಿ ಎಡವಿದೆ ಎಂದರು.
ಬೆಳ್ತಂಗಡಿ (ದ.ಕ.): ಮದುವೆ ಮಾಡಲು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಹೋರೆ ತಪ್ಪಿಸಲು ಮುಜರಾಯಿ ಇಲಾಖೆ 2021ರಲ್ಲಿ ರಾಜ್ಯಾದ್ಯಂತ ಜಾರಿಗೆ ತಂದಿದ್ದ ‘ಸಪ್ತಪದಿ’ ಯೋಜನೆ ಮುಂದುವರಿಯುವ ಸೂಚನೆ ಲಭಿಸಿದೆ. ಈ ಬಗ್ಗೆ ಧರ್ಮಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಯೋಜನೆ ಮುಂದುವರಿಸುವ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಮುಜರಾಯಿ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಮುತುವರ್ಜಿಯಿಂದ ‘ಸಪ್ತಪದಿ’ ಆರಂಭವಾಗಿತ್ತು.
ಈ ಮಾತ್ರೆಗಳನ್ನು ನೀವು ತಿನ್ನೋದು ಸಹಜ; ಆದರೆ ಇದರ ಅಡ್ಡಪರಿಣಾಮಗಳು ಒಂದೆರಡಲ್ಲ!

ಇಬ್ಬರು ಮಕ್ಕಳನ್ನು ನೋಡಿಕೊಳ್ಳೋ ಆಯಾಗೆ 80 ಲಕ್ಷ ರೂ. ಸಂಬಳ ಕೊಡ್ತಾರಂತೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 + 18 =
Remember me
