ಬೆಂಗಳೂರು:ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್​ ಅವರಿಗೆ ಈಗ ಜಾಮೀನು ಸಿಕ್ಕಿದೆ.
ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯದಿಂದ ಜಾಮೀನು ನೀಡಲಾಗಿದೆ. 4 ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ಹಾಕಲಾಗಿದೆ.
ಇಂದು ಸಂಜೆ ವೇಳೆಗೆ ವರ್ತೂರು ಸಂತೋಷ್ ಬಿಡುಗಡೆ ಆಗಲಿದ್ದಾರೆ. ಮತ್ತೆ ಅವರು ಬಿಗ್​ ಬಾಸ್​ನಲ್ಲಿ ಸ್ಪರ್ಧಿಸುತ್ತಾರಾ ಎಂಬ ಕೌತುಕ ಇದೀಗ ಎಲ್ಲರಲ್ಲಿ ಮೂಡಿದೆ.
ಹಳ್ಳಿಕಾರ್​ ತಳಿಯ ಹಸುಗಳ ಸಂರಕ್ಷಣೆ ಮಾಡುವ ಮೂಲಕ ವರ್ತೂರು ಸಂತೋಷ್​ ಜನಪ್ರಿಯತೆ ಗಳಿಸಿದ್ದರು. ಇದೇ ಕಾರಣಕ್ಕೆ ಅವರು ಬಿಗ್​ ಬಾಸ್​ಗೆ ಆಯ್ಕೆ ಆಗಿದ್ದರು. ಟ್ರೋಫಿ ಗೆಲ್ಲಬೇಕು ಎಂಬ ಆಸೆಯಿಂದ ಅವರು ಬಿಗ್ ಮನೆ ಪ್ರವೇಶಿಸಿದ್ದರು. ಆದರೆ ಅವರು ಧರಿಸಿದ್ದ ಹುಲಿ ಉಗುರಿನ ಪೆಂಡೆಂಟ್​ ಮೇಲೆ ಅರಣ್ಯಾಧಿಕಾರಿಗಳ ಕಣ್ಣು ಬಿದ್ದಿದ್ದರಿಂದ ಅಕ್ಟೋಬರ್ 22ರ ರಾತ್ರಿ ಬಿಗ್​ ಬಾಸ್​ ಮನೆಗೆ ಹೋಗಿ ಅವರನ್ನು ಬಂಧಿಸಲಾಯಿತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈಗ ಜಾಮೀನು ಸಿಕ್ಕಿದೆ.
ಅರಣ್ಯಾಧಿಕಾರಿಗಳಿಗೆ ಹುಲಿ ಉಗುರು ಹೋಲುವ ಪೆಂಡೆಂಟ್ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − four =
Remember me
