ಬೆಂಗಳೂರು:ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್​​ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರನ್ನು ಬಂಧನವಾಗುತ್ತಿದ್ದಂತೆ, ಇತ್ತ ಹುಲಿ ಉಗುರು ಮಾದರಿಯ ಪೆಂಡೆಂಟ್​​ ಧರಿಸಿರುವ ಸ್ಯಾಂಡಲ್​ವುಡ್​​ನ ಕೆಲವು ಸೆಲೆಬ್ರೆಟಿಗಳಿಗೆ ಸಂಕಷ್ಟ ಶುರುವಾಗಿದೆ. ಇದೀಗ ಈ ಪ್ರಕರಣದಲ್ಲಿ ಸಿಲುಕೊಂಡಿರುವ ಜಗ್ಗೇಶ್​​​ ಅವರು ಅರಣ್ಯಾಧಿಕಾರಿಗಳ ಕ್ರಮವನ್ನು ಪ್ರಶ್ನೆ ಮಾಡಿ ಕೋರ್ಟ್​​ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ಹುಲಿ ಉಗುರಿನ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಇದೀಗ ಈ ಪ್ರಕರಣದಲ್ಲಿ ಅನೇಕ ಸೆಲೆಬ್ರಿಟಿಗಳು ಹಾಗೂ ಕೆಲವು ಪ್ರಭಾವಿಗಳಿಗೂ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ಕೂಡಾ ದಾಖಲಾಗಿದ್ದು, ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಹುಲಿ ಉಗುರು ಬಳಸೋದು ಅಪರಾಧವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹುಲಿ ಉಗುರು ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಇತರ ಸೆಲೆಬ್ರಿಟಿಗಳ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಕೂಗು ಎದ್ದಿತ್ತು. ಹುಲಿ ಉಗುರು ಪೆಂಡೆಂಟ್‌ ಧರಿಸಿದ್ದಾರೆನ್ನಲಾದ ನಟ ಜಗ್ಗೇಶ್‌, ದರ್ಶನ್‌ ತೂಗುದೀಪ, ರಾಕ್‌ಲೈನ್‌ ವೆಂಕಟೇಶ್‌ ಹಾಗೂ ನಿಖಿಲ್‌ ಕುಮಾರಸ್ವಾಮಿ ಮನೆ ಮೇಲೂ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದು, ನೋಟಿಸ್​​ ನೀಡಿ ಶೋಧ ಕಾರ್ಯ ಮಾಡಿದ್ದಾರೆ.

ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿರುವ ಸೆಲೆಬ್ರೆಟಿಗಳ ಮನೆಗೆ ಆಗಮಿಸಿ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ. ಈ ವಿಚಾರದಲ್ಲಿ ಜಗ್ಗೇಶ್ ಅವರು ಅಸಮಾಧಾನಗೊಂಡಂತಿದೆ. ಅವರು ಈ ಪ್ರಕರಣದಲ್ಲಿ ಕೋರ್ಟ್ ಮೊರೆ ಹೋಗಿದ್ದಾರೆ. ಅರಣ್ಯಾಧಿಕಾರಿಗಳ ಕ್ರಮವನ್ನು ಪ್ರಶ್ನಿಸಿದ್ದಾರೆ. ಜೊತೆಗೆ, ಅರಣ್ಯಾಧಿಕಾರಿಗಳ ಕ್ರಮವನ್ನು ಕಾನೂನುಬಾಹಿರವೆಂದು ಘೋಷಿಸಲು ಮನವಿ ಮಾಡಿದ್ದಾರೆ.
ಏನಿದು ಪ್ರಕರಣ?:ಜಗ್ಗೇಶ್ ಅವರು 20ನೇ ವಯಸ್ಸಿನಲ್ಲಿದ್ದಾಗ ಅವರ ತಾಯಿ ಹುಲಿಯ ಉಗುರಿನ ಪೆಂಡೆಂಟ್​ನ ಗಿಫ್ಟ್ ಆಗಿ ನೀಡಿದ್ದರು. ಇದು ಜಗ್ಗೇಶ್ ಕೊರಳಲ್ಲೇ ಇತ್ತು. ಈ ಬಗ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ಬಳಿಕ ಜಗ್ಗೇಶ್ ಬಳಿಯೂ ಹುಲಿ ಉಗುರು ಇದೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು.
ಕೋರ್ಟ್​ಗೆ ಜಗ್ಗೇಶ್ ಮನವಿ :‘ಅರಣ್ಯಾಧಿಕಾರಿಗಳು ನೀಡಿದ ನೋಟಿಸ್ ರದ್ದು ಪಡಿಸಬೇಕು. ನೋಟಿಸ್​​ಗೆ ಉತ್ತರಿಸುವ ಮೊದಲೇ 14 ಅಧಿಕಾರಿಗಳಿಂದ ದಾಳಿ ನಡೆದಿದೆ. ಮನೆಯಲ್ಲಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನಾಧರಿಸಿ ತೇಜೋವಧೆ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸಬೇಕು’ ಎಂಬುದಾಗಿ ಜಗ್ಗೇಶ್ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ:ಯಾವುದೇ ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು, ಅಂದರೆ ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹ ತಪ್ಪು. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು. ಅಕ್ರಮ ಎಂದು ಸಾಬೀತಾದರೆ 3 ರಿಂದ 7 ವರ್ಷ ಜೈಲು ಮತ್ತು ಕನಿಷ್ಠ 10000 ರೂ ದಂಡ ವಿಧಿಸುವ ಸಾಧ್ಯತೆ ಇದೆ.
ಹುಲಿ ಉಗುರು ಪ್ರಕರಣ: ಪ್ರಭಾವಿಗಳಿಗೆ ಎದುರಾಯ್ತಾ ಸಂಕಷ್ಟ?

ನಟ ದರ್ಶನ್ ಬಳಿ ಇತ್ತಾ 8 ಹುಲಿ ಉಗುರಿನ ಮಾದರಿಯ ಪೆಂಡೆಂಟ್!;ಇದ್ಯಾವುದೂ ಅಸಲಿ ಅಲ್ವಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − two =
Remember me
