ಬೆಂಗಳೂರು:ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್​​ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಂತಹದ್ದೇ ಪೆಂಡೆಂಟ್ ಧರಿಸಿರುವ ಫೋಟೋಗಳು ವೈರಲ್​ ಆಗಿದ್ದು, ಈ ಕುರಿತಾಗಿ ದೂರು ಕೂಡಾ ದಾಖಲಾಗಿತ್ತು. ಇದೀಗ ದರ್ಶನ್​​ ಮನೆಗೆ ಪೊಲೀಸ್​​ ಅಧಿಕಾರಿಗಳು, ಅರಣ್ಯಾಧಿಕಾರಿಗಳು ಭೇಟಿ ನೀಡಿ ಶೋಧಕಾರ್ಯ ನಡೆಸುತ್ತಿದ್ದಾರೆ.
ನಟ ದರ್ಶನ್​ ಅವರು ಕೂಡ ಹುಲಿ ಉಗುರಿನ ಲಾಕೆಟ್​ ಧರಿಸಿದ್ದಾರೆ ಎಂಬ ಆರೋಪ ಎದುರಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್​ ಅವರು ಕ್ರಮ ಕೈ ಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದರು. ಇದೀಗ ದರ್ಶನ್​ ಅವರ ಮನೆಗೆ ಅರಣ್ಯಾಧಿಕಾರಿಗಳು ಹಾಗೂ ಪೊಲೀಸ್​​ ಅಧಿಕಾರಿಗಳು ಆಗಮಿಸಿದ್ದಾರೆ.
ಇದನ್ನೂ ಓದಿ:ಹುಲಿ ಉಗುರು ಪ್ರಕರಣ: ನಟ ದರ್ಶನ್​, ವಿನಯ್​ ಗುರೂಜಿ ವಿರುದ್ಧ ದೂರು ದಾಖಲು
ಆರ್​ಆರ್​​ ನಗರದಲ್ಲಿರುವ ನಟ ದರ್ಶನ್ ಮನೆಗೆ ಅರಣ್ಯಾಧಿಕಾರಿಗಳು ಆಗಮಿಸಿದ್ದಾರೆ. ಬೆಂಗಳೂರು ನಗರ ಆರ್​​ಎಫ್ ಸೇರಿದಂತೆ ಇಬ್ಬರು ಅಧಿಕಾರಿಗಳು ಬಂದಿದ್ದಾರೆ. ದರ್ಶನ್ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ಶೋಧಕಾರ್ಯ ನಡೆಸಲಾಗುತ್ತಿದೆ. ದರ್ಶನ್  ಅವರಿಂದ ಕೆಲವು ಮಾಹಿತನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಪ್ರಭಾವಿಗಳಿಗೆ ಎದುರಾಯ್ತಾ ಸಂಕಷ್ಟ? :ಬಿಗ್​ಬಾಸ್​ ಸ್ಪರ್ಧಿ ವರ್ತೂರ್​​ ಸಂತೋಷ್‌ ಮಾತ್ರವಲ್ಲದೆ, ಈ ಹಿಂದೆ ಹುಲಿ ಉಗುರು ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಇತರ ಸೆಲೆಬ್ರಿಟಿಗಳ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಕೂಗು ಎದ್ದಿದೆ. ಜನ ಸಾಮಾನ್ಯರ ವಿರುದ್ಧ ಮಾತ್ರವೇ ಈ ರೀತಿಯ ಕ್ರಮ ಏಕೆ? ಎಂದು ಪ್ರಶ್ನಿಸಿರುವ ನೆಟ್ಟಿಗರು, ಪ್ರಭಾವಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಯಾವಾಗ? ಎಂದು ಕೇಳಿದ್ದಾರೆ.
ನಟರಾದ ದರ್ಶನ್‌, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ, ಉಪೇಂದ್ರ, ರಾಕ್‌ಲೈನ್‌ ವೆಂಕಟೇಶ್‌ ಸೇರಿದಂತೆ ಹಲವು ನಟರು ಹಾಗೂ ಕುಣಿಗಲ್ ತಾಲ್ಲೂಕಿನ ಬಿದನಗೆರೆ ಸತ್ಯ ಶನೇಶ್ವರ ಸ್ವಾಮಿ ದೇಗುಲ ಪ್ರಧಾನ ಅರ್ಚಕ ಧನಂಜಯ ಸ್ವಾಮಿ ಸೇರಿದಂತೆ ಕೆಲ ಸ್ವಾಮೀಜಿಗಳು ಹುಲಿ ಉಗುರಿನ ಲಾಕೆಟ್‌ ಧರಿಸಿದ್ದಾರೆ ಎನ್ನಲಾದ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಪೊಲೀಸ್​​ ಅಧಿಕಾರಿಗಳು, ಅರಣ್ಯಾಧಿಕಾರಿಗಳು ಎಚ್ಚರಿತುಕೊಂಡು ಕ್ರಮ ಕೈಗೊಳ್ಳುತ್ತಿದ್ದಾರೆ.
ಹುಲಿ ಉಗುರು ಪೆಂಡೆಂಟ್‌ ಧರಿಸಿದ್ದಾರೆನ್ನಲಾದ ನಟ ಜಗ್ಗೇಶ್‌, ದರ್ಶನ್‌ ತೂಗುದೀಪ, ರಾಕ್‌ಲೈನ್‌ ವೆಂಕಟೇಶ್‌ ಹಾಗೂ ನಿಖಿಲ್‌ ಕುಮಾರಸ್ವಾಮಿಗೂ ಸಂಕಷ್ಟ ಎದುರಾಗಿದೆ.
ವರ್ತೂರು ಸಂತೋಷ್ ಪ್ರಕರಣ:ಹುಲಿ ಉಗುರು ಧರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ಬಂಧಿಸಲಾಗಿತ್ತು. ಅರಣ್ಯ ಅಧಿಕಾರಿಗಳು ಇಂದು ನ್ಯಾಯಾಲಯಕ್ಕೆ ಸಂತೋಷ್ ಅವರನ್ನು ಹಾಜರು ಪಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನಗಳ ಕಾಲ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ.  ಹಬ್ಬದ ಹಿನ್ನೆಲೆ ಎರಡು ದಿನ ಕೋರ್ಟ್ ರಜೆ ಇದ್ದ ಕಾರಣ  ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ನಲ್ಲಿರುವ ಜಡ್ಜ್‌ ನಿವಾಸಕ್ಕೆ ಕರೆದೊಯ್ದು ಸಂತೋಷ್‌ರನ್ನು ಹಾಜರು ಪಡಿಸಲಾಯ್ತು. ವಿಚಾರಣೆ ನಡೆಸಿದ ಎಸಿಜೆಎಂ ನ್ಯಾಯಧೀಶರು  ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರಿಗೆ ಸಂಕಷ್ಟ ಎದುರಾಗಿದೆ. ಹೌದು, ಸಂತೋಷ್ ಆಪ್ತ ರಂಜಿತ್ ಹಾಗೂ ಚಿನ್ನದಂಗಡಿ ಮಾಲೀಕನಿಗೆ ನೋಟಿಸ್ ಜಾರಿ ಮಾಡಲಾಗಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ:ಯಾವುದೇ ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು, ಅಂದರೆ ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹ ತಪ್ಪು. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು. ಅಕ್ರಮ ಎಂದು ಸಾಬೀತಾದರೆ 3 ರಿಂದ 7 ವರ್ಷ ಜೈಲು ಮತ್ತು ಕನಿಷ್ಠ 10000 ರೂ ದಂಡ ವಿಧಿಸುವ ಸಾಧ್ಯತೆ ಇದೆ.

2022ರಲ್ಲೇ ಹುಲಿ ಚರ್ಮ ಹಿಂದಿರುಗಿಸಲಾಗಿದೆ; ಈ ಚರ್ಮ ಎಲ್ಲಿಂದ ಬಂತು? ಎಂದು ಸ್ಪಷ್ಟನೆ ನೀಡಿದ ವಿನಯ್ ಗುರೂಜಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 2 =
Remember me
