ಬೆಂಗಳೂರು:ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್​​ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ನಂತರ. ಹುಲಿ ಉಗುರಿನ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಇದೀಗ ಈ ಪ್ರಕರಣದಲ್ಲಿ ಅನೇಕ ಸೆಲೆಬ್ರಿಟಿಗಳು ಹಾಗೂ ಕೆಲವು ಪ್ರಭಾವಿಗಳಿಗೂ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ಕೂಡಾ ದಾಖಲಾಗಿದ್ದು, ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಹುಲಿ ಉಗುರು ಬಳಸೋದು ಅಪರಾಧವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಸ್ಪರ್ಧಿ ವರ್ತೂರ್​ ಸಂತೋಷ್​ ಅವರನ್ನು ಬಂಧಿಸಲಾಗಿದೆ. ಸ್ಯಾಂಡಲ್​ವುಡ್​​ನ ಅನೇಕ ಸೆಲೆಬ್ರೆಟಿಗಳ ಬಳಿ ಕೂಡಾ ಹುಲಿ ಉಗುರು ಇದೆ ಎನ್ನುವ ಆರೋಪ ಕೇಳಿ ಬಂದಿದ್ದು, ಸಾಬೀತಾದ್ರೆ ಇವರೆಲ್ಲ ಬಂಧನ ಕೂಡ ಗ್ಯಾರಂಟಿ ಎನ್ನುವ ಮಾತು ಕೇಳಿ ಬಂದಿದೆ.
ಪ್ರಭಾವಿಗಳಿಗೆ ಎದುರಾಯ್ತಾ ಸಂಕಷ್ಟ?:ಬಿಗ್​ಬಾಸ್​ ಸ್ಪರ್ಧಿ ವರ್ತೂರ್​​ ಸಂತೋಷ್‌ ಮಾತ್ರವಲ್ಲದೆ, ಈ ಹಿಂದೆ ಹುಲಿ ಉಗುರು ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಇತರ ಸೆಲೆಬ್ರಿಟಿಗಳ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಕೂಗು ಎದ್ದಿದೆ. ಜನ ಸಾಮಾನ್ಯರ ವಿರುದ್ಧ ಮಾತ್ರವೇ ಈ ರೀತಿಯ ಕ್ರಮ ಏಕೆ? ಎಂದು ಪ್ರಶ್ನಿಸಿರುವ ನೆಟ್ಟಿಗರು, ಪ್ರಭಾವಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಯಾವಾಗ? ಎಂದು ಕೇಳಿದ್ದಾರೆ.
ಹುಲಿ ಉಗುರು ಉರುಳು:ನಟರಾದ ದರ್ಶನ್‌, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ, ಉಪೇಂದ್ರ, ರಾಕ್‌ಲೈನ್‌ ವೆಂಕಟೇಶ್‌ ಸೇರಿದಂತೆ ಹಲವು ನಟರು ಹಾಗೂ ಕುಣಿಗಲ್ ತಾಲ್ಲೂಕಿನ ಬಿದನಗೆರೆ ಸತ್ಯ ಶನೇಶ್ವರ ಸ್ವಾಮಿ ದೇಗುಲ ಪ್ರಧಾನ ಅರ್ಚಕ ಧನಂಜಯ ಸ್ವಾಮಿ ಸೇರಿದಂತೆ ಕೆಲ ಸ್ವಾಮೀಜಿಗಳು ಹುಲಿ ಉಗುರಿನ ಲಾಕೆಟ್‌ ಧರಿಸಿದ್ದಾರೆ ಎನ್ನಲಾದ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಪೊಲೀಸ್​​ ಅಧಿಕಾರಿಗಳು, ಅರಣ್ಯಾಧಿಕಾರಿಗಳು ಎಚ್ಚರಿತುಕೊಂಡು ಕ್ರಮ ಕೈಗೊಳ್ಳುತ್ತಿದ್ದಾರೆ.
ಹುಲಿ ಉಗುರು ಪೆಂಡೆಂಟ್‌ ಧರಿಸಿದ್ದಾರೆನ್ನಲಾದ ನಟ ಜಗ್ಗೇಶ್‌, ದರ್ಶನ್‌ ತೂಗುದೀಪ, ರಾಕ್‌ಲೈನ್‌ ವೆಂಕಟೇಶ್‌ ಹಾಗೂ ನಿಖಿಲ್‌ ಕುಮಾರಸ್ವಾಮಿಗೂ ಸಂಕಷ್ಟ ಎದುರಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಜನ ಸಾಮಾನ್ಯರ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅರಣ್ಯಾಧಿಕಾರಿಗಳು ಇಂದು ನಟರಾದ ದರ್ಶನ್​ ಹಾಗೂ ಜಗ್ಗೇಶ್ ಮತ್ತು ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಮನೆಯ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಟ ದರ್ಶನ ಮನೆಯಲ್ಲಿ ಶೋಧ:ಇಂದು (ಅಕ್ಟೋಬರ್​ 25) ಅರಣ್ಯಾಧಿಕಾರಿಗಳು ದರ್ಶನ್​ ಮನೆಗೆ ಬಂದಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ದರ್ಶನ್​ ಅವರ ನಿವಾಸದಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ದರ್ಶನ್​ ಬಳಿ ಇರುವುದು ನಿಜವಾದ ಹುಲಿ ಉಗುರು ಹೌದೋ ಅಥವಾ ಅಲ್ಲವೋ ಎಂಬುದು ಗೊತ್ತಾಗಬೇಕಿದೆ. ಒಂದು ವೇಳೆ ಹುಲಿ ಉಗುರು ಇರುವುದು ಖಚಿತವಾದರೆ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ನನ್ನ ಬಳಿ ಇರುವುದು ಹುಲಿ ಉಗುರಲ್ಲ ಎಂದ ನಿಖಿಲ್:ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ನಿವಾಸಕ್ಕೆ ಅಧಿಕಾರಿಗಳ ಆಗಮನ:ಜೆ.ಪಿ ನಗರದ ನಿಕಿಲ್ ಕುಮಾರಸ್ವಾಮಿ ನಿವಾಸಕ್ಕೆ ಅರಣ್ಯ ಅಧಿಕಾರಿಗಳ ಆಗಮಿಸಿದ್ದಾರೆ. ನೋಟೀಸ್ ನೀಡಲು ಬಂದ ನಾಲ್ಕು ಜನ ಅಧಿಕಾರಿಗಳ ತಂಡ, ನಿಖಿಲ್‌ಮನೆಯಲ್ಲಿ ಇಲ್ಲದ ಕಾರಣ ಪಿ.ಎ ನೋಟೀಸ್ ಸರ್ವ್ ಮಾಡೋ ಸಾಧ್ಯತೆ ಇದೆ.
ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಮನೆಗೆ ಅಧಿಕಾರಿಗಳು:ಹುಲಿ ಉಗುರು ಪೆಂಡೆಂಟ್‌ ಧರಿಸಿದ್ದಾರೆನ್ನಲಾದ ಪ್ರಕರಣದಲ್ಲಿ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಮನೆಯ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.ಹಾಲಕ್ಷ್ಮೀ ಲೇಔಟ್​​​ನಲ್ಲಿರುವ ರಾಕ್​ಲೈನ್ ವೆಂಟೇಶ್​​​ ಅವರು​ ನಿವಾಸದಲ್ಲಿ ಅರಣ್ಯಾಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ರಾಕ್​ಲೈನ್​ ವೆಂಕಟೇಶ್​ ಮನೆಯಲ್ಲಿ ಇಲ್ಲ ಎಂದು ಕೆಲಸದವರು ಹೇಳಿದ್ದಾರೆ. ಬಳಿಕ ಮನೆಯಲ್ಲಿದ್ದ ಮಗನನ್ನು ಕರೆದು ಸರ್ಚ್​ ವಾರೆಂಟ್​​ಗೆ ಸಹಿ ಹಾಕಿಸಿಕೊಂಡ ಅಧಿಕಾರಿಗಳು ಮನೆಯೊಳಗೆ ಹೋಗಿ ಶೋಧ ಶುರು ಮಾಡಿದ್ದಾರೆ.
ಜಗ್ಗೇಶ್​​ ಮನೆಗೆ ಮನೆಗೆ ಅಧಿಕಾರಿಗಳು:ಹುಲಿ ಉಗುರು ಹೊಂದಿರುವ ಸೆಲೆಬ್ರೆಟಿಗಳ ಮನೆ ಮೇಲೆ ದಾಳಿ ನಡೆಸುತ್ತಿರುವ ಅಧಿಕಾರಿಗಳು ಈಗ  ಜಗ್ಗೇಶ್​ ಅವರ ಮಲ್ಲೇಶ್ವರಂ ನಿವಾಸಕ್ಕೂ ಭೇಟಿ ನೀಡಿದ್ದಾರೆ. ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತಾಡಿದ್ದ ನಟ ಜಗ್ಗೇಶ್​ ನನ್ನ ಬಳಿ ಹುಲಿ ಉಗುರಿನ ಲಾಕೆಟ್ ಇದೆ ಎಂದು ಹೇಳಿದ್ದಾರೆ. ನನಗೆ 20 ವರ್ಷ ತುಂಬಿದಾಗ ಅಮ್ಮ ನನಗಾಗಿ ಈ ಲಾಕೆಟ್ ನೀಡಿದ್ದರು. ಮಗ ಹುಲಿ ಇದ್ದಾಂಗೆ ಇರಬೇಕು ಎಂದು ಅಮ್ಮ ಈ ಲಾಕೆಟ್​ನ ಹಾಕಿದ್ದರು ಎಂದು ಜಗ್ಗೇಶ್ ಹೇಳಿದ್ದರು.
ವಿನಯ್​ ಗುರೂಜಿ ಆಶ್ರಮಕ್ಕೆ ಅಧಿಕಾರಿಗಳ ಭೇಟಿ:ಹುಲಿ ಚರ್ಮವನ್ನು ಗೂರುಜಿ ಬಳಿ ಇದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಂಗಳೂರಿನ ಗೌರಿಗದ್ದೆ ಆಶ್ರಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಅರಣ್ಯಾಧಿಕಾರಿಗಳು, ಹಾಗೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಈಗಾಗಲೇ ಅವರುಗಳು ಹೆಸರು ಪ್ರಸ್ತಾವಾಗಿ ತುಂಬಾ ಸಮಯ ಆಗಿರುವುದರಿಂದ ಅವರುಗಳು ಈಗಾಗಲೇ ಎಚ್ಚೆತ್ತುಕೊಂಡಿರುತ್ತಾರೆ ಎಂಬ ಅಭಿಪ್ರಾಯವೂ ಸೋಶಿಯಲ್​​ ಮೀಡಿಯಾದಲ್ಲಿ ಕೇಳಿ ಬರುತ್ತಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ:ಯಾವುದೇ ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು, ಅಂದರೆ ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹ ತಪ್ಪು. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು. ಅಕ್ರಮ ಎಂದು ಸಾಬೀತಾದರೆ 3 ರಿಂದ 7 ವರ್ಷ ಜೈಲು ಮತ್ತು ಕನಿಷ್ಠ 10000 ರೂ ದಂಡ ವಿಧಿಸುವ ಸಾಧ್ಯತೆ ಇದೆ.
ಹುಲಿ ಉಗುರು ಪ್ರಕರಣ; ನಟ ಜಗ್ಗೇಶ್​ ವಿರುದ್ಧ ದೂರು ದಾಖಲು
ಹುಲಿ ಉಗುರು ಪ್ರಕರಣ; ನಟ ಜಗ್ಗೇಶ್​ ವಿರುದ್ಧ ದೂರು ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 14 =
Remember me
