ಬೆಂಗಳೂರು:ರಾಜ್ಯದ ನಾಲ್ಕು ಪ್ರಮುಖ ಹಾಗೂ ಐತಿಹಾಸಿಕ ಸ್ಥಳಗಳಿಗೆ ಬಿಗಿಭದ್ರತೆಯನ್ನು ಒದಗಿಸಲಾಗಿದೆ. ಪ್ರೇಕ್ಷಣೀಯ ಸ್ಥಳಗಳಾದ ಹಂಪಿ, ಹಳೇಬೀಡು, ಪಟ್ಟದಕಲ್ಲು ಹಾಗೂ ಗೋಳಗುಮ್ಮಟಗಳಿಗೆ ಈ ಭಾರಿ ಭದ್ರತೆಯನ್ನು ನೀಡಲಾಗಿದೆ.
ಜೂನ್ 21ರಂದು 8ನೇ ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ಐದು ಐತಿಹಾಸಿಕ ಸ್ಥಳಗಳಲ್ಲಿ ಅಜಾದಿ ಕಾ ಅಮೃತ ಮಹೋತ್ಸವ ಆಚರಣೆ ನಡೆಸಲಾಗುತ್ತದೆ. ಅಹಿತಕರ ಘಟನೆ ನಡೆಯದಂತೆ ಈ ಎಲ್ಲ ಸ್ಥಳಗಳಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ದೇಶದ 75 ಸ್ಮಾರಕಗಳಲ್ಲಿ ವಿಶ್ವ ಯೋಗ ದಿನಾಚರಣೆ ಏರ್ಪಡಿಸಲಾಗಿದೆ. ರಾಜ್ಯದಲ್ಲಿ ಹಂಪಿ, ಹಳೇಬಿಡು, ಗೋಳಗುಮ್ಮಟ, ಪಟ್ಟದಕಲ್ಲುಗಳಲ್ಲಿ ಯೋಗ ಆಚರಣೆ ನಡೆಯಲಿದೆ. ಇದನ್ನು ವಿರೋಧಿಸಿ ಕೆಲ ಸಮಾಜಘಾತುಕ ಶಕ್ತಿಗಳು ದುಷ್ಕೃತ್ಯ ಎಸಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಯೋಗ ದಿನಾಚರಣೆ ನಡೆಯುವ ಸ್ಮಾರಕಕ್ಕೆ ಬಿಗಿ ಭದ್ರತೆ ಒದಗಿಸುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ.
ಇದರ ಅನ್ವಯ ಪೊಲೀಸ್ ಇಲಾಖೆ, ವಿಜಯನಗರ, ಹಾಸನ, ವಿಜಯಪುರ, ಬಾಗಲಕೋಟೆ ಜಿಲ್ಲಾ ಎಸ್‌ಪಿ ಮತ್ತು ದಕ್ಷಿಣ ವಲಯ, ಉತ್ತರ ವಲಯ, ಬಳ್ಳಾರಿ ವಲಯ ಐಜಿಪಿಗಳಿಗೆ ಬಿಗಿ ಭದ್ರತೆ ಒದಗಿಸುವಂತೆ ಸೂಚನೆ ಕೊಟ್ಟು ಪೊಲೀಸ್ ಮಹಾನಿರ್ದೇಶಕರು ಆದೇಶಿಸಿದ್ದಾರೆ.
ಮತ್ತೊಂದು ಭೀಕರ ಅಪಘಾತ; ಅಪ್ಪನ ದಿನದಂದೇ ಇನ್ನೊಂದು ತಂದೆ-ಮಗನ ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − three =
Remember me
