ಬೆಂಗಳೂರು:ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಮೈದಾನದಲ್ಲಿ ನಾಳೆ ಬೆಳಗ್ಗೆ 8ಕ್ಕೆ ಧ್ವಜಾರೋಹಣ ನಡೆಯಲಿದ್ದು, ಪೊಲೀಸರು ಈಗಿನಿಂದಲೇ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಮಾತ್ರವಲ್ಲ, ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೂಡ ಮಾತನಾಡಿದ್ದು, ಅಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ ಎಂಬುದಾಗಿ ಅಭಯ ನೀಡಿದ್ದಾರೆ.
ಚಾಮರಾಜಪೇಟೆ ಮೈದಾನದಲ್ಲಿ ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ಮಾಡಲಾಗುತ್ತದೆ. ಅದಕ್ಕೆ ಬೇಕಾದಂತಹ ಕ್ರಮಗಳನ್ನು ಪೊಲೀಸ್ ಇಲಾಖೆ ತೆಗೆದುಕೊಂಡಿದೆ. ನನಗೆ ಅನಿಸಿದ ಮಟ್ಟಿಗೆ ಮೈದಾನದಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಯಾರು ಬೇಕಾದರೂ ಬಂದು ಭಾಗವಹಿಸಬಹುದು ಎಂದು ಗೃಹಸಚಿವರು ತಿಳಿಸಿದ್ದಾರೆ.
ಈ ಹಿಂದೆ ವಿವಾದ ಇತ್ತು, ಆ ಬಗ್ಗೆ ಮಾತನಾಡಿ ಸರಿಪಡಿಸಲಾಗಿದೆ. ಸ್ಥಳೀಯ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಅವರಿಗೆ ಕಾರ್ಪೋರೇಷನ್​ನವರು ಆಹ್ವಾನ ನೀಡಿದ್ದಾರೆ. ಸರ್ಕಾರದ ವತಿಯಿಂದ ಕಾರ್ಯಕ್ರಮ ನಡೆಯುತ್ತದೆ. ಇದು ಸ್ವಾತಂತ್ರ್ಯ ಉತ್ಸವ, ಎಲ್ಲರೂ ಬರಬೇಕು ಎಂದು ಅವರು ಹೇಳಿದ್ದಾರೆ.
ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಈಗಾಗಲೇ ಅಲ್ಲಿ ಆರ್​ಎಎಫ್​ ಸೇರಿ 850ಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ಅಧಿಕಾರಿಗಳು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಸ್ವಾತಂತ್ರ್ಯೋತ್ಸವಕ್ಕೆ ಮೈದಾನದ ಒಳಗೆ ಸಾರ್ವಜನಿಕರಿಗೆ ನಿರ್ಬಂಧವಿಲ್ಲ. ಆದರೆ ಸಂಘ-ಸಂಸ್ಥೆಗಳು ಮೈದಾನದ ಸುತ್ತಮುತ್ತ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್ ಅಳವಡಿಸುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.
‘ನನ್ನನ್ಯಾರೋ ಕೊಲೆ ಮಾಡ್ತಾರೆ’ ಎಂದು ಪೊಲೀಸರಿಗೆ ಆಗಾಗ ಕರೆ ಮಾಡ್ತಿದ್ದ ಮಹಿಳೆಯ ಕೊಲೆ!
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten + 17 =
Remember me
