ಬೆಂಗಳೂರು:ಏಪ್ರಿಲ್​ 20ರ ನಂತರ ಲಾಕ್​ಡೌನ್​ ಸ್ವಲ್ಪ ಮಟ್ಟಿಗೆ ಸಡಿಲಿಕೆ ಆಗಬಹುದು ಎಂದು ನಿರೀಕ್ಷೆ ಇಟ್ಟುಕೊಂಡವರಿಗೆ ಸರ್ಕಾರ ಶಾಕ್​ ನೀಡಿದೆ.
ಲಾಕ್​ಡೌನ್​ನಲ್ಲಿ ಯಾವುದೇ ವಿನಾಯಿತಿ ಇಲ್ಲ. ಮೇ 3ರವರೆಗೂ ಯಥಾ ಸ್ಥಿತಿಯಲ್ಲಿಯೇ ಮುಂದುವರಿಯಲಿದೆ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಿದ್ದು, ರಾಜ್ಯದಲ್ಲಿ ಲಾಕ್​ಡೌನ್​ ನಾಳೆಯಿಂದ ಇನ್ನೂ ಬಿಗಿಯಾಗಲಿದೆ ಎಂದು ತಿಳಿಸಿದೆ.
ಲಾಕ್​ಡೌನ್​ನಲ್ಲಿ ವಿನಾಯಿತಿ ಇಲ್ಲ. ಕೇಂದ್ರದಿಂದ ಹೊಸ ಮಾರ್ಗಸೂಚಿ ಬಂದರೆ ಮತ್ತೆ ಎರಡು ದಿನಗಳಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಅಷ್ಟೇ ಅಲ್ಲ ರಾಜ್ಯದಲ್ಲಿ, ಉತ್ತರ ಪ್ರದೇಶ ಮತ್ತು ಕೇರಳ ಮಾದರಿಯ ಕಾಯ್ದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ಸಿದ್ಧವಾಗಿದೆ.
ಆಶಾ ಕಾರ್ಯಕರ್ತೆಯರು, ಪೊಲೀಸರು, ವೈದ್ಯರ ಕಾರ್ಯಕ್ಕೆ ಅಡ್ಡಿ ಪಡಿಸಿದರೆ, ಉದ್ದೇಶ ಪೂರ್ವಕವಾಗಿ ಕರೊನಾ ಸೋಂಕು ಹರಡುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕಾಯ್ದೆಯನ್ನು ರಾಜ್ಯದಲ್ಲೂ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.
ಸರ್ಕಾರ ಜಾರಿಗೊಳಿಸುತ್ತಿರುವ ಈ ಹೊಸ ಕಾನೂನಿನ ಅನ್ವಯ, ಸರ್ಕಾರದ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕನಿಷ್ಠ ಎರಡು ವರ್ಷ ಜೈಲು ಶಿಕ್ಷೆಯನ್ನೂ ವಿಧಿಸಬಹುದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಪ್ರಚಾರ ಮಾಡುವವರ ವಿರುದ್ಧವೂ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಬಹುದಾಗಿದೆ.
ಹಾಗೇ ಕ್ವಾರಂಟೈನ್​ಗೆ ಯಾರು ಬರುವುದಿಲ್ಲವೋ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅದು ಶಿಕ್ಷಾರ್ಹ ಅಪರಾಧ. ಈ ನಿಯಮ ಈಗಾಗಲೇ ಉತ್ತರ ಪ್ರದೇಶ, ಕೇರಳಗಳಲ್ಲಿ ಜಾರಿಯಲ್ಲಿದೆ. ನಮ್ಮಲ್ಲೂ ಅಧಿಸೂಚನೆ ಮೂಲಕ ಆ ನಿಯಮವನ್ನು ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಹೇಳಿದ್ದಾರೆ.
ಯೋಗಿ ಆದಿತ್ಯನಾಥರಿಗೆ ಪಿತೃ ವಿಯೋಗ: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ತಂದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 7 =
Remember me
