ಉಡುಪಿ:ಅನೇಕ ಸಮಯದಿಂದ ಚರ್ಚೆಗಳಾಗುತ್ತಿರುವ ನಾಡಗೀತೆ ಅವಧಿ ಮತ್ತು ಸಂಗೀತಕ್ಕೆ ರ್ತಾಕ ಅಂತ್ಯ ನೀಡುವ ಜತೆಗೆ, ಏಕರೂಪದ ಕನ್ನಡಾಂಬೆ ಚಿತ್ರ ಬಿಡುಗಡೆಗೆ ನಿಯಮ ರೂಪಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್​ಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರ ಯುವಜನ ಸೇವೆ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ ಇಲಾಖೆ ಸಂಯುಕ್ತ ಸಭೆ ಕರೆಯಲಾಗಿದೆ. ಇದರಲ್ಲಿ ಜಯಂತಿ ಆಚರಣೆ ಸ್ವರೂಪ ಸಹಿತ ವಿವಿಧ ವಿಚಾರಗಳಲ್ಲಿ ಚರ್ಚೆ ಇರಲಿದೆ. ದೇಶಭಕ್ತಿಯ ವಾತಾವರಣ ನಿರ್ವಿುಸಲು ಸ್ವಾತಂತ್ರ್ಯೊತ್ಸವದ ಅಮೃತ ಮಹೋತ್ಸವ ಆಚರಣೆ ಹೇಗೆ ಎಂಬ ಬಗ್ಗೆ 15 ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದರು.
ಜನಾಶೀರ್ವಾದ ಇಲ್ಲದ ಕಾಂಗ್ರೆಸ್:ಜನರ ಆಶೀರ್ವಾದ ಕಳೆದು ಕೊಂಡ, ಜನರ ಭಾವನೆಗಳಿಂದ ದೂರವಾಗಿರುವ ಕಾಂಗ್ರೆಸ್ ಬಿಜೆಪಿ ಜನಾಶೀರ್ವಾದ ಯಾತ್ರೆ ಬಗ್ಗೆ ಮಾತನಾಡುತ್ತಿದೆ. ಅಫ್ಘಾನಿಸ್ತಾನವನ್ನು ಗಮನಿಸಿದಾಗ ದೇಶದ ನಾಯಕತ್ವ ಮೋದಿ ಅವರಲ್ಲದೆ, ಕಾಂಗ್ರೆಸ್ ಬಳಿಯಿದ್ದರೆ ದೇಶದ ಪರಿಸ್ಥಿತಿ ಬೇರೆಯೇ ಆಗುತ್ತಿತ್ತು ಎಂಬ ಆತಂಕ ಜನರಿಗಿದೆ ಎಂದರು.
ನಾರಾಯಣ ಗುರು ನಿಗಮಕ್ಕೆ ಕಾರ್ಯಯೋಜನೆ:ಹಿಂದುಳಿದ ಸಮುದಾಯದವರ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯದಲ್ಲಿ ನಾರಾಯಣ ಗುರು ನಿಗಮ ಸ್ಥಾಪಿಸಲು ಶೀಘ್ರ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್​ಕುಮಾರ್ ಹೇಳಿದರು. ನಗರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೋಮವಾರ ಆಯೋಜಿಸಿದ ರಾಜ್ಯ ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉದ್ಘಾಟಿಸಿ ಮಾತನಾಡಿದರು. ನಿಗಮ ಸ್ಥಾಪನೆ ಬಗ್ಗೆ ಸಿಎಂ ಜತೆ ಚರ್ಚೆ ನಡೆಸಲಾಗಿದ್ದು, ತಾತ್ವಿಕ ಒಪ್ಪಿಗೆ ಲಭಿಸಿದೆ ಎಂದರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮುಜರಾಯಿ ಇಲಾಖೆಯಲ್ಲಿ ಮಾನ್ಯತೆ ಪಡೆದ ದೇವಸ್ಥಾನಗಳ ಪಟ್ಟಿಯಲ್ಲಿ ನಾರಾಯಣ ಗುರು ಮಂದಿರಗಳನ್ನೂ ಸೇರಿಸಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಸರ್ಕಾರದ ಅನುದಾನ ಸುಲಭದಲ್ಲಿ ಪಡೆಯಲು ಸಾಧ್ಯ ಎಂದು ಹೇಳಿದರು.
ದೇಶಾದ್ಯಂತ ನಡೆಯುತ್ತಾ ಜಾತಿ ಆಧಾರಿತ ಜನಗಣತಿ?; ಪ್ರಧಾನಿಯನ್ನು ಭೇಟಿ ಆಗಿ ಚರ್ಚಿಸಿದರು 11 ಪಕ್ಷಗಳ ಮುಖಂಡರು

ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + three =
Remember me
