ಬೆಂಗಳೂರು:ರಾಜ್ಯದಲ್ಲಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಪ್ರಾರಂಭವಾಗಿದ್ದು ರಾಜ್ಯದಲ್ಲಿ ನಿಗದಿತ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇದ್ದು ಸಕಾಲದಲ್ಲಿ ರೈತರಿಗೆ ಇವುಗಳನ್ನು ತಲುಪಿಸಲಾಗುವುದು ಎಂದು ಕೃಷಿ ಸ ಚಿವರಾದ ಬಿ.ಸಿ. ಪಾಟೀಲ್ ಅವರು ತಿಳಿಸಿದರು.
ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ಜರುಗಿದ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಕಾರ್ಯಗಾರ ಉದ್ದೇಶಿಸಿ ಮಾತನಾಡುತ್ತಾ ಅಧಿಕಾರಿಗಳಿಗೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ಸರಬರಾಜು ಆಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು .
ಕೃಷಿ ಇಲಾಖೆಯ ಕಾರ್ಯದರ್ಶಿಗಳಾದ ಶಿವಯೋಗಿ ಕಳಸದ, ಅವರು ಕೃಷಿ ಇಲಾಖೆಯ ಎಲ್ಲಾ ಕಾರ್ಯಕ್ರಮಗಳಿಗೆ ಸರ್ಕಾರದ ಹಂತದಲ್ಲಿ ಅನುದಾನ ಸಕಾಲಕ್ಕೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು ರೈತರಿಗೆ ಇಲಾಖೆ ಕಾರ್ಯಕ್ರಮಗಳನ್ನು ತಲುಪಿಸುವ ಜವಾಬ್ದಾರಿಯನ್ನು ಇಲಾಖೆ ಅಧಿಕಾರಿಗಳು ವಹಿಸಬೇಕೆಂದು ತಿಳಿಸಿದರು.
ಕೃಷಿ ಆಯುಕ್ತರಾದ ಬ್ರಿಜೇಶ್ ಕುಮಾರ್ ದಿಕ್ಷಿತ್ ರವರು ಮಾತನಾಡಿ ಫಸಲ್ ಭೀಮಾ ಯೋಜನೆ ಮತ್ತು ಬೆಳೆ ಸಮೀಕ್ಷೆ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು ಹಾಗೂ ಬೆಳೆ ಸಮೀಕ್ಷೆಯನ್ನು ರೈತರೇ ಹೆಚ್ಚಾಗಿ ಮಾಡುವಂತೆ ಪ್ರೋತ್ಸಾಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಲಾನಯನ ಇಲಾಖೆ ಆಯುಕ್ತರಾದ ವೆಂಕಟೇಶ್ ರವರು ಮಾತನಾಡಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ರಾಜ್ಯದ ಎಲ್ಲಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರು, ಉಪ ಕೃಷಿ ನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು ಸದರಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಕಾಂಗ್ರೆಸ್​ ಮನೆಯೊಂದು ಮೂರು ಬಾಗಿಲಾಗಿತ್ತು, ಈಗ ಒಂದು ಬಾಗಿಲನ್ನು ರಮ್ಯಾ ಅವರೇ ತೆಗೆದಿದ್ದಾರೆ: ಸಚಿವ ಆರ್​.ಅಶೋಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
