ಕೋಲಾರ:ತಿರುಪತಿ ತಿಮ್ಮಪ್ಪನ ದರ್ಶನ ಮಾಡಿಕೊಂಡು ಕಾರಿನಲ್ಲಿ ವಾಪಸ್​ ಬರುತ್ತಿದ್ದ ಕುಟುಂಬವೊಂದು ಜಮ್ಮನಹಳ್ಳಿ ಗೇಟ್ ಬಳಿ ಭಾನುವಾರ ತಡರಾತ್ರಿ ಭೀಕರ ಅಪಘಾತಕ್ಕೀಡಾಗಿದೆ.
ತಿರುಪತಿಯಿಂದ ಮಾಲೂರಿಗೆ ಹೊರಟಿದ್ದ ಸ್ವಿಫ್ಟ್ ಕಾರು ಮತ್ತು ಲಾರಿ ನಡುವೆ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಜಮ್ಮನಹಳ್ಳಿ ಗೇಟ್ ಬಳಿ ಅಪಘಾತವಾಗಿದೆ.ಇದನ್ನೂ ಓದಿರಿಬೆಳ್ಳಂಬೆಳಗ್ಗೆ ಭೀಕರ ಅಫಘಾತ, ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಘಟನೆಯಲ್ಲಿ ಮಾಲೂರು ತಾಲೂಕಿನ ಶಿವನಾಪುರ ಗ್ರಾಮದ ಪಾರ್ವತಮ್ಮ(50) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕ ವೆಂಕಟೇಶ್, ಶಿಲ್ಪ ಹಾಗೂ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಅವರನ್ನು ಆರ್​.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂರು ದಿನದ ಹಿಂದೆಯೂ ಇಂತಹದ್ದೇ ದುರಂತದಲ್ಲಿ ನಾಲ್ವರು ಬಲಿಯಾಗಿದ್ದರು. ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದ ಗುಂಪೊಂದು, ದರ್ಶನ ಮುಗಿಸಿ ಕಾರಿನಲ್ಲಿ ವಾಪಸ್​ ಬರುತಿತ್ತು. ಹೆದ್ದಾರಿಯಲ್ಲಿ ಕಾರು ಚಲಿಸುತ್ತಿರುವಾಗಲೇ ಚಾಲಕ ನಿದ್ರೆಗೆ ಜಾರಿ ನಿಂತಿದ್ದ ಲಾರಿಯೊಂದಕ್ಕೆ ಕಾರನ್ನು ಡಿಕ್ಕಿ ಹೊಡೆಸಿದ್ದ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.
ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿ ಬರುವಾಗ ನಿದ್ರೆಗೆ ಜಾರಿದ ಚಾಲಕ! ಭೀಕರ ಅಪಘಾತಕ್ಕೆ ನಾಲ್ವರು ಬಲಿ

ಲೈವ್​ನಲ್ಲೇ ವಿಷ ಕುಡಿದ ಅರ್ಚಕ! 3 ದಿನದ ಬಳಿಕ ಸೆಲ್ಫಿವಿಡಿಯೋ ವೈರಲ್​, ಡೆತ್​ನೋಟ್​ನಲ್ಲಿದೆ ಸ್ಫೋಟಕ ರಹಸ್ಯ

ಪರಸ್ತ್ರೀ ಜತೆ ಮೂರು ಮಕ್ಕಳ ತಂದೆಗೆ ಲವ್ವಿಡವ್ವಿ! ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದವರ ಕಥೆ ಏನಾಯ್ತು?

ಸೆಕ್ಸ್​ ಮಾಡುವಾಗ ಉಸಿರುಗಟ್ಟಿ ಸತ್ತೇ ಹೋದಳು… ಬ್ಯಾಚಲರ್​ ಮನೆಯಲ್ಲಿ ವಿವಾಹಿತೆ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + twelve =
Remember me
