
ಬೆಂಗಳೂರು:ದೇಶದ ಪ್ರಮುಖ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಟಿಜೆಎಸ್‌ಬಿ ಸಹಕಾರಿ ಬ್ಯಾಂಕ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಿಖಿಲ್ ನಂದಕುಮಾರ್ ಅರೆಕರ್ ಅವರು ನೇಮಕಗೊಂಡಿದ್ದಾರೆ.ನಗರ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 31 ವರ್ಷಗಳ ವ್ಯಾಪಕ ಅನುಭವ ಹೊಂದಿರುವ, ನಿಖಿಲ್ ನಂದಕುಮಾರ್ ಅರೆಕರ್ ಅವರು ವಾಣಿಜ್ಯದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದಾರೆ ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆ್ ಬ್ಯಾಂಕಿಂಗ್ ಮತ್ತು ಫೈನಾನ್ಸ್ (ಐಐಬಿಎ್) ನಿಂದ ಸಿಎಐಐಬಿ ಪದವಿ ಪಡೆದಿದ್ದಾರೆ.1993 ರಲ್ಲಿ ಟಿಜೆಎಸ್‌ಬಿ ಸಹಕಾರಿ ಬ್ಯಾಂಕ್ ಲಿಮಿಟೆಡ್‌ನೊಂದಿಗೆ ತಮ್ಮ ಪ್ರಯಾಣ ಪ್ರಾರಂಭಿಸಿದ ನಿಖಿಲ್ ಅರೆಕರ್ ಅವರು, ಸಂಸ್ಥೆಯೊಳಗೆ ವಿವಿಧ ಹುದ್ದೆಗಳನ್ನು ಅಲಂಕರಿಸುವ ಮೂಲಕ ಇದೀಗ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನಕ್ಕೆ ಏರಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಅವರು ಬ್ಯಾಂಕ್‌ನ ಕ್ರೆಡಿಟ್, ಫಾರೆಕ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ವರ್ಟಿಕಲ್‌ಗಳಲ್ಲಿ ಕೆಲಸ ಮಾಡಿದ್ದಾರೆ ಮತ್ತು ಬ್ಯಾಂಕಿಂಗ್, ರಿಟೇಲ್ ಕ್ರೆಡಿಟ್, ಕಾರ್ಪೊರೇಟ್ ಕ್ರೆಡಿಟ್, ಎಸ್‌ಎಂಇ ಕ್ರೆಡಿಟ್, ಫಾರೆಕ್ಸ್, ಎನ್‌ಪಿಎ ಮ್ಯಾನೇಜ್‌ಮೆಂಟ್ ಮತ್ತು ಬಿಸಿನೆಸ್ ಡೆವಲಪ್‌ಮೆಂಟ್ ಕ್ಷೇತ್ರಗಳಲ್ಲಿ ಅಪಾರ ಅನುಭವವನ್ನು ಗಳಿಸಿದ್ದಾರೆ.ನಿಖಿಲ್ ಅರೆಕರ್ ಬ್ಯಾಂಕಿನ ಬೆಳವಣಿಗೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಾರೆ ಮತ್ತು ಗ್ರಾಹಕರ ಅನುಭವವನ್ನು ಹೆಚ್ಚಿಸುತ್ತಾರೆ ಎಂದು ಮಂಡಳಿಯು ವಿಶ್ವಾಸ ವ್ಯಕ್ತಪಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + eleven =
Remember me
