|ಶ್ರೀಕಾಂತ ಅಕ್ಕಿಬಳ್ಳಾರಿ
ಕರೊನಾ ಮೂರನೇ ಅಲೆಯಿಂದ ಮಕ್ಕಳನ್ನು ಪಾರುಮಾಡಲು ಮುಂದಾಗಿರುವ ಜಿಲ್ಲಾಡಳಿತ, ರಾಜ್ಯದಲ್ಲೇ ಪ್ರಥಮವಾಗಿ ಬಾಲ ಚೈತನ್ಯ ಯೋಜನೆ ಜಾರಿಗೊಳಿಸಿದೆ. ಮೊದಲ ಹಂತವಾಗಿ ಬಳ್ಳಾರಿ ನಗರ ಮತ್ತು ಗ್ರಾಮೀಣ ಹಾಗೂ ಹೊಸಪೇಟೆ, ಹಡಗಲಿ ತಾಲೂಕುಗಳಲ್ಲಿ ಜೂ.8ರಂದು ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿದ್ದು, ಕ್ರಮೇಣ ಉಳಿದೆಡೆ ವಿಸ್ತರಿಸಲು ಉದ್ದೇಶಿಸಲಾಗಿದೆ.
ಏನಿದು ಯೋಜನೆ?:ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ, ಅವರಿಗೆ ಕರೊನಾ ಪರೀಕ್ಷೆ ಮಾಡಿಸಿ ಅವರ ಮೇಲೆ ನಿಗಾ ವಹಿಸಲಾಗುತ್ತದೆ. ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದ್ದು, ಡಿಎಂಎಫ್ ನಿಧಿಯ ಹಣ ಬಳಕೆ ಮಾಡಿಕೊಳ್ಳಲಾಗುತ್ತಿದೆ. 0-18 ವರ್ಷದೊಳಗಿನ ಮಕ್ಕಳಲ್ಲಿ ಮೂರು ವಲಯ ಮಾಡಲಾಗಿದೆ. ರೆಡ್ ಜೋನ್​ನಲ್ಲಿರುವ ಮಕ್ಕಳ ರಕ್ಷಣೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ನಂದಿನಿ, ಡಿಎಚ್​ಒ ಎಚ್.ಎಲ್.ಜನಾರ್ದನ ತಿಳಿಸಿದ್ದಾರೆ. ಜೂನ್ ಬಳಿಕ ಎರಡನೇ ಅಲೆ ಕಡಿಮೆಯಾಗಿ ಮೂರನೇ ಅಲೆ ಒಕ್ಕರಿಸಿಕೊಳ್ಳುವ ಸಾಧ್ಯತೆ ಹೆಚ್ಚಿದ್ದು, ಇದು ನೇರವಾಗಿ 18ವರ್ಷದೊಳಗಿನ ಮಕ್ಕಳು ಹಾಗೂ ಅಪೌಷ್ಟಿಕತೆಯಿಂದ ಬಳಲುತ್ತಿರುವ ಕಂದಮ್ಮಗಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂಬ ವರದಿಯನ್ನು ವೈದ್ಯರು, ತಜ್ಞರು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಹೀಗಾಗಿ ಬಳ್ಳಾರಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ 45 ಸಾವಿರ ಮಕ್ಕಳ ಪೈಕಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 852 ಮಕ್ಕಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲು ನಿರ್ಧರಿಸಿದೆ. ಇದಕ್ಕಾಗಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಜ್ಜಾಗಿದೆ.
ಒಂಬತ್ತು ಮಕ್ಕಳು ಮೃತ:ಅವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮೊದಲ ಮತ್ತು ಎರಡನೇ ಅಲೆಯಲ್ಲಿ ಮೂರು ಸಾವಿರ ಮಕ್ಕಳಿಗೆ ಸೋಂಕು ತಗಲಿದ್ದು ಈ ಪೈಕಿ 9 ಮಕ್ಕಳು ಮೃತಪಟ್ಟಿದ್ದಾರೆ. ಮೂರನೇ ಅಲೆ ಬರುವುದರೊಳಗೆ ಅವಳಿ ಜಿಲ್ಲೆಯ ಮಕ್ಕಳಲ್ಲಿರುವ ಆರೋಗ್ಯ ಸಮಸ್ಯೆಗಳ ಪಟ್ಟಿ ಮಾಡಿಕೊಳ್ಳಲಾಗುತ್ತಿದೆ. ಮಕ್ಕಳ ಹಿನ್ನೆಲೆಯೇನು? ಪಾಲಕರು ಇದ್ದಾರೆಯೇ ಅಥವಾ ಇಲ್ಲವೇ? ಕರೊನಾ ಸೋಂಕು ತಗುಲಿದ್ದರೆ ಅವರಿಗೆ ಯಾವ ರೀತಿ ಚಿಕಿತ್ಸೆ ಕೊಡಿಸಬಹುದು? ಸೋಂಕು ಮಕ್ಕಳಿಗೆ ತಗುಲದಂತೆ ನೋಡಿಕೊಳ್ಳಲು ಏನು ಮಾಡಬೇಕು? ಎಂಬ ಪ್ರಶ್ನಾವಳಿ ಸಿದ್ಧಪಡಿಸಿಕೊಳ್ಳಲಾಗಿದೆ. ಮಕ್ಕಳು ಮತ್ತು ಇವರ ಜತೆ ಇರುವ ತಾಯಂದಿರಿಗೆ ಮೂರು ಹೊತ್ತು ಪೌಷ್ಟಿಕ ಆಹಾರ, ಮಕ್ಕಳು ಲವಲವಿಕೆಯಿಂದ ಇರಲು ಕಾರ್ಯಕ್ರಮ ಹಮ್ಮಿಕೊಳ್ಳುವುದು, ಮಕ್ಕಳನ್ನು ಅಲ್ಲಿಗೆ ಸೇರಿಸುವ ಮುನ್ನ ವಸತಿ ನಿಲಯಗಳ ಸ್ಥಿತಿಗತಿ ಅಧ್ಯಯನ, ಮೊದಲಾದ ಮಾಹಿತಿಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಇನ್ನೊಂದು ವಾರದಲ್ಲಿ ವಸತಿ ನಿಲಯಗಳನ್ನು ಸಿದ್ಧಪಡಿಸಿ, ಅವರ ತಾಯಂದಿರೊಂದಿಗೆ ಮಕ್ಕಳನ್ನು ಕರೆತರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ರಾಜ್ಯದಲ್ಲೇ ಮೊದಲ ಬಾರಿಗೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಮಕ್ಕಳನ್ನು ಕರೊನಾ ಮೂರನೇ ಅಲೆಯಿಂದ ಪಾರುಮಾಡಲು ಸೋಂಕು ತಗುಲುವುದಕ್ಕೆ ಮುನ್ನವೇ ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಿ, ಅವರ ಆರೋಗ್ಯ ರಕ್ಷಣೆಗೆ ಮುಂದಡಿ ಇಡಲಾಗುತ್ತಿದೆ. ತಾಲೂಕಿಗೊಂದು ವಸತಿ ನಿಲಯ ವಶಕ್ಕೆ ಪಡೆದು ಮೊದಲ ಹಂತದಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಕ್ವಾರಂಟೈನ್ ಮಾಡಲಾಗುತ್ತಿದೆ.
|ಆರ್. ನಾಗರಾಜ್ಉಪ ನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬಳ್ಳಾರಿ
ಅಡುಗೆ ಮನೆವರೆಗೆ ಹಿಂಬಾಲಿಸಿಕೊಂಡು ಬಂದು ವೃದ್ಧೆಯ ಸರ ಎಗರಿಸಿದ ಕಳ್ಳ!
ರಾಜ್ಯದಲ್ಲಿ ಶತಕ ಬಾರಿಸಿದ ಪೆಟ್ರೋಲ್​ ದರ; ಕೆಲವೆಡೆ 100 ದಾಟಿತು ಲೀಟರ್ ಬೆಲೆ, ಇನ್ನಿದೆ ನೂರೆಂಟು ಬರೆ…


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
