ಮೈಸೂರು: ನಾಲಿಗೆ ಇದೆ ಎಂದು ತೆವಲಿಗಾಗಿ ಮಾತನಾಡಬಾರದು ಎಂದು ಸಚಿವ ಬಿ.ಸಿ. ಪಾಟೀಲ್​ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿಯಾಗಿದ್ದಾಗ ಕುಮಾರಸ್ವಾಮಿ ಸಾಲಮನ್ನಾ ಘೊಷಣೆ ಮಾಡಿದರೆ ವಿನಾ ಅದಕ್ಕೆ ಸೂಕ್ತ ರೂಪುರೇಷೆ ಹಾಕಿ ಅನುದಾನ ಇಟ್ಟಿರಲಿಲ್ಲ. ಯಡಿಯೂರಪ್ಪ ಅದನ್ನು ಈಗ ನಿಭಾಯಿಸುತ್ತಿದ್ದಾರೆ ಎಂದು ಬಿ.ಸಿ. ಪಾಟೀಲ್ ಟೀಕಿಸಿದ್ದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಡಿಕೆ, ಸುಮ್ಮನೆ ಸುಳ್ಳು ಹೇಳಿಕೊಂಡು ಓಡಾಡುವ ಬಿ.ಸಿ. ಪಾಟೀಲ್​ಗೆ ಸಾಲ ಮನ್ನಾದ ಬಗ್ಗೆ ಮಾಹಿತಿಯೇ ಇಲ್ಲ. ನಾನು ಅಧಿಕಾರದಿಂದ ಇಳಿಯುವಾಗ ಬರೀ ಘೊಷಣೆ ಮಾಡಿಲ್ಲ. ಬದಲಿಗೆ 25 ಸಾವಿರ ಕೋಟಿ ರೂ. ಹೊಂದಿಸಿ ಕೆಳಗೆ ಇಳಿದಿದ್ದೇನೆ. ಅಲ್ಲದೆ ನಾನು ಅನುಮೋದನೆ ನೀಡಿದ್ದ 800 ಕೋಟಿ ರೂ. ಅನ್ನು ಬಿಡುಗಡೆ ಮಾಡದೆ ಹಾಗೆಯೇ ಇಟ್ಟುಕೊಂಡಿದ್ದಾರೆ ಎಂದರು. ರೈತರಿಂದ ಸರಳ ದಾಖಲೆ ಮಾತ್ರ ಕೇಳಿದ್ದೆವು. ದಾಖಲೆ ತಪ್ಪಿದ್ದರೆ ಸರಿಪಡಿಸೋದು ಕೃಷಿ ಇಲಾಖೆ ಕೆಲಸ. ತಮ್ಮ ಕೆಲಸವನ್ನು ಬಿಟ್ಟು ಮತ್ತೊಬ್ಬರ ಬಗ್ಗೆ ಟೀಕೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರದ ಬಜೆಟ್​ ಬಗ್ಗೆ ಸ್ವಪಕ್ಷೀಯರಲ್ಲೇ ಅಸಮಾಧಾನ; ಆದರೆ ಪರಿಸ್ಥಿತಿ ಅರ್ಥ ಮಾಡಿಕೊಂಡ ಜಿ.ಟಿ.ದೇವೇಗೌಡರು..

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:nine + nine =
Remember me
