ಬೆಂಗಳೂರು:ಇಂದು ಸಚಿವ ಸಂಪುಟ ಸಭೆಯ ನಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್​ನ ಐದು ಗ್ಯಾರಂಟಿಗಳಲ್ಲಿ ಎಲ್ಲವನ್ನೂ ಈ ವರ್ಷವೇ ಜಾರಿ ಮಾಡುವುದಾಗಿ ಹೇಳಿದ್ದಾರೆ. ಈ ಸಂದರ್ಭ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಸಿಎಂ ಸಿದ್ದರಾಮಯ್ಯ, ಪ್ರತೀ ಮನೆಯ ಒಡತಿಗೂ 2000 ರೂ. ನೀಡುವುದಾಗಿ ಘೋಷಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ, “ನಾವು ಹೇಳಿರುವುದು ಮನೆ ಯಜಮಾನಿ ಖಾತೆಗೆ 2000 ರೂ. ಜಮೆ ಮಾಡುತ್ತೇವೆ. ಅವರ ಅಕೌಂಟ್​ಗೆ ತಿಂಗಳಿಗೆ 2 ಸಾವಿರ ರೂ. ಜಮಾ ಮಾಡುತ್ತೇವೆ ಎಂದಿದ್ದೇವೆ. ಆದರೆ ಇದಕ್ಕಾಗಿ ಅಕೌಂಟ್​ ನಂಬರ್, ಆಧಾರ್​ ನಂಬರ್​, ಅರ್ಜಿ ಮುಂತಾದವನ್ನು ನೀಡಬೇಕು. ನಂತರ ಇಲಾಖೆಯವರು ಈ ಮಾಹಿತಿಯನ್ನು ಪ್ರಾಸೆಸ್ ಮಾಡಿ ಆಗಸ್ಟ್​ 15ನೇ ತಾರೀಕಿನಿಂದ ಈ ಯೋಜನೆಯನ್ನು ಜಾರಿಗೆ ತರುತ್ತಾರೆ. ಈಗಾಗಲೇ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯತ್ತಿರುವವರಿಗೂ ಈ ಭತ್ಯೆ ಸಿಗಲಿದೆ. ಈ ಯೋಜನೆ ಎಲ್ಲಾ ಬಿಪಿಎಲ್ ಹಾಗೂ ಎಪಿಎಲ್ ಮಹಿಳೆಯರಿಗೆ ಈ ಲಾಭ ಸಿಗಲಿದೆ” ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಈ ಹಣ ಅತ್ತೆಗೆ ನೀಡುವುದೋ, ಸೊಸೆಗೆ ನೀಡುವುದೋ ಎಂಬ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, “ಈ ಯೋಜನೆಯ ಫಲಾನುಭವಿಗಳಾಗಲು ಜನರು ಬ್ಯಾಂಕ್ ಅಕೌಂಟ್ ದಾಖಲೆ, ಆಧಾರ್ ಕಾರ್ಡ್ ಕೊಡಬೇಕು. ಆಗಲೇ ಮನೆ ಯಜಮಾನಿ ಖಾತೆಗೆ ಎರಡು ಸಾವಿರ ಜಮಾ ಆಗುತ್ತೆ. ಇನ್ನು ಈ ಹಣ ಅತ್ತೆಗೆ ತಲುಪುತ್ತದೋ ಸೊಸೆಗೆ ತಲುಪುತ್ತದೋ ಎನ್ನುವ ವಿಚಾರ, ಮನೆಯವರಿಗೇ ಬಿಟ್ಟಿದ್ದು. ಯಾರು ಮನೆಯ ಯಜಮಾನಿ ಎಂಬ ವಿಚಾರದ ಮಾಹಿತಿಯನ್ನು ಕುಟುಂಬದವರೇ ನೀಡಬೇಕು. ಕುಟುಂಬದವರು ಕೊಟ್ಟ ಮಾಹಿತಿ ಆಧಾರದ ಮೇಲೆ ಫಲಾನುಭವಿ ಯಾರು ಎನ್ನುವುದು ನಿರ್ಧಾರ ಆಗುತ್ತದೆ” ಎಂದು ಹೇಳಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen + 5 =
Remember me
