ಬೆಂಗಳೂರು:ರಾಜ್ಯದಲ್ಲಿ ಕರೊನಾ ಪಾಸಿಟಿವ್ ಪ್ರಕರಣಗಳು ತೀವ್ರಗತಿಯಲ್ಲಿ ಕಾಡುತ್ತಿದ್ದು, ಕಳೆದ ಮೂರು ದಿನಗಳಿಂದ ಪ್ರತಿದಿನ 200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಮೊನ್ನೆ 270 ಮಂದಿ, ನಿನ್ನೆ 217 ಹಾಗೂ ಇಂದು 271 ಮಂದಿ ಕರೊನಾಗೆ ಬಲಿಯಾಗಿದ್ದಾರೆ.
ಇಂದಿನ ವರದಿ ಪ್ರಕಾರ ಕರ್ನಾಟಕದಲ್ಲಿ ಹೊಸದಾಗಿ 40,990 ಕೋವಿಡ್​-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 15,64,132ಕ್ಕೆ ತಲುಪಿದೆ. ಸಮಾಧಾನದ ಸಂಗತಿ ಎಂದರೆ ಸೋಂಕಿತರ ಪೈಕಿ ಇವತ್ತೊಂದೇ ದಿನ 18,341 ಜನರು ಗುಣಮುಖರಾಗಿ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಕೇಂದ್ರಗಳಿಂದ ಬಿಡುಗಡೆ ಆಗಿದ್ದಾರೆ. ಇದುವರೆಗೆ ಒಟ್ಟು 11,43,250 ಮಂದಿ ಗುಣವಾಗಿ ಮನೆ ಸೇರಿಕೊಂಡಿದ್ದಾರೆ.
ಅದಾಗ್ಯೂ ರಾಜ್ಯದಲ್ಲಿ 4,05,068 ಸಕ್ರಿಯ ಪ್ರಕರಣಗಳಿದ್ದು, ಇವತ್ತೊಂದೇ ದಿನ 271 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಇದುವರೆಗೆ ಕರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 15,794ಕ್ಕೆ ತಲುಪಿದೆ. ರಾಜ್ಯದಲ್ಲಿ ಗುರುವಾರ 35,024, ಶುಕ್ರವಾರ 48,296 ಹೊಸ ಕೋವಿಡ್​-19 ಪ್ರಕರಣಗಳು ದೃಢಪಟ್ಟಿದ್ದವು.
ಡಿಸೆಂಬರ್‌ವರೆಗೂ ಇರುತ್ತೆ ಈ ಕರೊನಾ ಕಾಟ: ಎಚ್ಚರಿಕೆ ನೀಡಿದ ಡಾ. ಮಂಜುನಾಥ್

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಕರೊನಾ ಆಘಾತ; ‘ನೆಮ್ಮದಿಯಾಗಿ ನಿದ್ರಿಸಿ’ ಎಂದವರು ಚಿರನಿದ್ರೆಗೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
