ಬೆಂಗಳೂರು :ರಾಜ್ಯದಲ್ಲಿ ಕರೊನಾ ಎರಡನೇ ಅಲೆ ಅಬ್ಬರ ತೀವ್ರಗೊಂಡಿದ್ದು, ಆರು ತಿಂಗಳ ನಂತರ ಅತೀ ಹೆಚ್ಚು ಸೋಂಕು ಹಾಗೂ ಮರಣ ಪ್ರಮಾಣ ವರದಿಯಾಗಿದ್ದು, ಕಳೆದ 24 ಗಂಟೆಯಲ್ಲಿ 7955 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 46 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದಿನದ ಸೋಂಕು ಪ್ರಮಾಣ ಶೇ. 5.88ಕ್ಕೆ ಏರಿಕೆಯಾಗಿದ್ದು, ಈವರೆಗೂ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 10.48 ಲಕ್ಷ ದಾಟಿದೆ.
ಬೆಂಗಳೂರಿನಲ್ಲಿ 29 ಮಂದಿ, ಮೈಸೂರು ಐವರು, ಕಲಬುರಗಿ, ಬೆಳಗಾವಿಯಲ್ಲಿ ತಲಾ ಇಬ್ಬರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಧಾರವಾಡ, ಮಂಡ್ಯ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರಂತೆ ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 46 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 12,813 ತಲುಪಿದೆ.
ರಾಜ್ಯದಲ್ಲಿ 58,084 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ ಬೆಂಗಳೂರಿನಲ್ಲಿ 169, ಕಲಬುರಗಿ 32, ಮೈಸೂರು 23 ಸೇರಿದಂತೆ 378 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಆಸ್ಪತ್ರೆಗಳಲ್ಲಿ ಹಾಗೂ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ದಾಖಲಾಗಿದ್ದು, ಲಕ್ಷಣ ರಹಿತ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:ಸಾರಿಗೆನೌಕರರುಹಠ ಬಿಟ್ಟು ಬನ್ನಿ: ಡಿಸಿಎಂ ಡಾ.ಅಶ್ವತ್ಥ ನಾರಾಯಣ ಸಲಹೆ
ಹತ್ತು ಜಿಲ್ಲೆಗಳಲ್ಲಿ ಹೆಚ್ಚಿದ ಸೋಂಕು :ಕೋವಿಡ್ ಸೋಂಕು ಜಿಲ್ಲೆಯಿಂದ ಜಿಲ್ಲೆಗೆ ವಿಸ್ತರಣೆಯಾಗುತ್ತಿದ್ದು, ಬೆಂಗಳೂರು ನಗರ ಜಿಲ್ಲೆ 5,576, ಮೈಸೂರು 283, ಕಲಬುರಗಿ 211, ಬೀದರ್ 186, ಹಾಸನ 153, ತುಮಕೂರು 145, ವಿಜಯಪುರ 127 ಚಿಕ್ಕಬಳ್ಳಾಪುರ 119, ದಕ್ಷಿಣ ಕನ್ನಡ 115, ಮಂಡ್ಯ 104 ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
1.35 ಲಕ್ಷ ಕೋವಿಡ್ ಪರೀಕ್ಷೆ:ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಶಿಾರಸು ಮೇರೆಗೆ ದಿನದ ಕೋವಿಡ್ ಪರೀಕ್ಷೆ ಸಂಖ್ಯೆ ಹೆಚ್ಚಿಸಲಾಗಿದೆ. ಶುಕ್ರವಾರ ಒಂದೇ ದಿನ 7,230 ರ‌್ಯಾಪಿಡ್ ಅಂಟಿಜೆನ್ ಟೆಸ್ಟ್ ಹಾಗೂ 1.27 ಲಕ್ಷ ಆರ್‌ಟಿಪಿಸಿಆರ್ ಪರೀಕ್ಷೆ ಸೇರಿದಂತೆ ಅತೀ ಹೆಚ್ಚು 1,35,163 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಒಟ್ಟು ಪರೀಕ್ಷೆಗಳ ಸಂಖ್ಯೆ 2.24 ಕೋಟಿ ಮೀರಿದೆ.
1.31 ಲಕ್ಷ ಮಂದಿಗೆ ಲಸಿಕೆ :ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಲಸಿಕೆ ಅಭಿಯಾನ ಚುರುಕುಗೊಳಿಸಲಾಗಿದೆ. ಶುಕ್ರವಾರ ರಾಜ್ಯಾದ್ಯಂತ 4,915 ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಸಲಾಗಿದ್ದು, ಹಿರಿಯನಾಗರಿಕರು, 45-60 ವರ್ಷ ವಯೋಮಾನದವರು, ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರು ಸೇರಿದಂತೆ ಒಂದೇ ದಿನ 1.31 ಲಕ್ಷ ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಈವರೆಗೂ 53.48 ಲಕ್ಷ ಡೋಸ್ ಲಸಿಕೆ ವಿತರಿಸಲಾಗಿದೆ.
ರಾಜ್ಯದಲ್ಲಿ ನೈಟ್​ ಕರ್ಫ್ಯೂ ಜಾರಿ- ಎಲ್ಲೆಲ್ಲಿ ನಿಷೇಧ? ಏನಿರುತ್ತೆ? ಏನಿರಲ್ಲ? ರಾತ್ರಿ ಬಂದ್​ ಏಕೆ? ಇಲ್ಲಿವೆ ಡಿಟೇಲ್ಸ್​

ಪುರಾತತ್ವ ಸ್ಥಳಗಳಲ್ಲಿ ಚಿತ್ರೀಕರಣ ಮಾಡುವುದು ಇನ್ಮುಂದೆ ಸುಲಭ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
