ಬೆಂಗಳೂರು:ಆಡಳಿತಾರೂಢ ಬಿಜೆಪಿ ಜತೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಲಿಗೂ ಪ್ರತಿಷ್ಠೆಯ ಸಮರವಾಗಿ ಮಾರ್ಪಟ್ಟಿರುವ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಗೆ ಅಖಾಡ ಸಜ್ಜಾಗಿದೆ. ಎರಡೂ ಕ್ಷೇತ್ರಗಳಲ್ಲಿ ಮಂಗಳವಾರ ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಶಾಂತಿಯುತ ಮತದಾನದ ಸಂಕಲ್ಪ ತೊಟ್ಟು ಹದ್ದಿನ ಕಣ್ಣಿಟ್ಟಿದೆ. ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿ ಸರ್ಕಾರವನ್ನು ಗಟ್ಟಿಗೊಳಿಸುವುದು ಬಿಜೆ ಪಿಯ ಆಶಯವಾಗಿದ್ದರೆ, ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಪಕ್ಷದ್ರೋಹ ಮಾಡಿದವರ ವಿರುದ್ಧ ಸೇಡು ತೀರಿಸಿಕೊಳ್ಳುವುದು ಕಾಂಗ್ರೆಸ್​ನ ಪ್ರತಿತಂತ್ರವಾಗಿದೆ. ಕೆಪಿಸಿಸಿ ಸಾರಥ್ಯ ವಹಿಸಿಕೊಂಡ ಬಳಿಕ ಬಂದಿರುವ ಈ ಮೊದಲ ಚುನಾವಣೆ ಗೆಲ್ಲುವುದು ಡಿ.ಕೆ.ಶಿವಕುಮಾರ್ ಪಾಲಿಗೂ ಪ್ರತಿಷ್ಠೆಯಾಗಿದೆ. ರಾಷ್ಟ್ರೀಯ ಪಕ್ಷಗಳ ನೇರ ಹಣಾಹಣಿ ನಡುವೆಯೂ ಗೆಲುವು ಸಾಧಿಸುವುದು ಜೆಡಿಎಸ್​ನ ತಂತ್ರಗಾರಿಕೆಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − six =
Remember me
