ಬೆಂಗಳೂರು:ಇಂದು ರಾಜ್ಯ ಸಚಿವ ಸಂಪುಟ ಸಭೆಯನ್ನು ಬೆಳಗ್ಗೆ 11 ಗಂಟೆಗೆ ನಡೆಸುವುದಾಗಿ ನಿರ್ಧರಿಸಲಾಗಿದ್ದು ಈ ಸಭೆ ಭಾರೀ ಮಹತ್ವ ಪಡೆದಿದೆ. ಇಂದು ಗ್ಯಾರಂಟಿ ಯೋಜನೆಗಳ ಕುರಿತಾಗಿ ಗಂಭೀರ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಂಪುಟ ಸಭಾಂಗಣದಲ್ಲಿ ಸಭೆ ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ವಹಿಸಲಿದ್ದಾರೆ.
ಇಂದಿನ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಸಚಿವರಿಂದ ಗಂಭೀರ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಶಕ್ತಿ ಯೋಜನೆ, ಅನ್ನಭಾಗ್ಯ, ಗೃಲಕ್ಷ್ಮೀ ಯೋಜನೆ ಮುಂತಾದವುಗಳ ಬಗ್ಗೆ ಚರ್ಚೆ ನಡೆಯಲಿದೆ.
ಇದೇ ಸಂದರ್ಭದಲ್ಲಿ ಅಕ್ಕಿ‌ ಖರೀದಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ. ಜತೆಗೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಲು ಅರ್ಜಿ ಸಲ್ಲಿಕೆ ದಿನಾಂಕ ನಿಗದಿ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ರಾಜ್ಯವನ್ನು ಬಾಧಿಸುತ್ತಿರುವ ಬೇರೆ ಬೇರೆ ಸಮಸ್ಯೆಗಳ ಕುರಿತಾಗಿ ಸಚಿವರು ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮಳೆಯ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೈಗೊಳ್ಳಬಹುದಾದ ಪರಿಹಾರ ಕ್ರಮಗಳ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ಅದಲ್ಲದೇ, ಚುನಾವಣೆಗೂ ಮುನ್ನ, ವಿಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ನಿಂದ ಭಾರೀ ಟೀಕೆಗೆ ಒಳಗಾಗಿದ್ದ ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆಯೂ ಸಚಿವರು ಚರ್ಚಿಸಬಹುದು. ಮೈ- ಬೆಂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲನೆಗೆ ತಾಂತ್ರಿಕ ತಂಡವನ್ನು ರಚಿಸುವ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.
ಹಿಂದಿನ ಸರ್ಕಾರದ ಅಕ್ರಮಗಳ ಬಗ್ಗೆಯೂ ತನಿಖೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ. ಅವುಗಳಲ್ಲಿ ಪ್ರಮುಖವಾದ ಬಿಟ್ ಕಾಯಿನ್ ಪ್ರಕರಣದ ತನಿಖೆಗೆ ಎಸ್ ಐಟಿ‌ ರಚನೆಗೆ ತೀರ್ಮಾನ ಸಾಧ್ಯತೆ ಇದೆ ಎನ್ನಲಾಗಿದೆ. ಅದಲ್ಲದೇ 40 ಪರ್ಸೆಂಟ್ ಹಗರಣದ ಕುರಿತಾಗಿ ತನಿಖೆ ನಡೆಸಲು ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್​ಐಟಿ ರಚಿಸುವ ಸಾಧ್ಯತೆ ಹೆಚ್ಚಾಗಿ ಇದೆ. ಅದಷ್ಟೇ ಅಲ್ಲದೇ ಆರೋಗ್ಯ ಇಲಾಖೆಯಲ್ಲಿ ಔಷಧ ಪರರಗಳ ಖರೀದಿ ಸಂಬಂಧ ಸಿಐಡಿ ತನಿಖೆಗೆ ಆದೇಶಿಸಬಹುದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
