|ಅತುಲ್ ಭಟ್
ವಸಂತ ವಿಷುವತ್ ಸಂಕ್ರಾಂತಿ ಒಂದು ವಿಶೇಷ ಖಗೋಳ ವಿದ್ಯಮಾನ. ಈ ದಿನ ಭೂಮಿಯ ಮೇಲೆ ಹಗಲು ಹಾಗೂ ರಾತ್ರಿಯ ಅವಧಿ ಸಮನಾಗಿರುತ್ತದೆ. ವರ್ಷಕ್ಕೆ ಎರಡು ಬಾರಿ, ಮಾರ್ಚ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಈ ವಿದ್ಯಮಾನ ಸಂಭವಿಸುತ್ತದೆ. ಪ್ರತೀ ವರ್ಷ ಭೂಮಿ-ಸೂರ್ಯನ ಬಂಧನದಿಂದ ಸಂಭವಿಸುವ ಈ ವಿದ್ಯಮಾನ, ಮಾ.21ರಂದು ನಡೆಯದೆ.
ವಿಷುವತ್ ಸಂಕ್ರಾಂತಿಯಂದು ಸೂರ್ಯನು ನಿಖರವಾಗಿ ಪೂರ್ವ ದಿಕ್ಕಿನಲ್ಲಿ ಉದಯಿಸಿ, ಪಶ್ಚಿಮ ದಿಕ್ಕಿನಲ್ಲಿ ಅಸ್ತಮಿಸುತ್ತಾನೆ. ಈ ದಿನ ಸೂರ್ಯನ ಬೆಳಕು ಭೂಮಿಯ ಸಮಭಾಜಕ ವೃತ್ತದ ಮೇಲೆ ನೇರ ಬೀಳುತ್ತದೆ. ಸೂರ್ಯನು ಉತ್ತರ ದಿಕ್ಕಿನಿಂದ ದಕ್ಷಿಣ ದಿಕ್ಕಿನೆಡೆಗೆ ಚಲಿಸಲು ಪ್ರಾರಂಭಿಸುವುದರಿಂದ, ಉತ್ತರ ಗೋಳಾರ್ಧದಲ್ಲಿ ವಸಂತ ಋತು ಆರಂಭವಾಗುತ್ತದೆ. ಈ ದಿನ ಸೂರ್ಯನ ಕೇಂದ್ರ ಬಿಂದು ದಿಗಂತದ ಮೇಲೆ 12 ಗಂಟೆಗಳ ಕಾಲ ಮತ್ತು ದಿಗಂತದ ಕೆಳಗೆ 12 ಗಂಟೆಗಳ ಕಾಲ ಇರುತ್ತದೆ. ವಿಷುವತ್ ದಿನದಂದು ನಾವಿರುವ ಸ್ಥಳದ ಅಕ್ಷಾಂಶವನ್ನು ಕಂಡು ಹಿಡಿಯಬಹುದು. ಈ ಪ್ರಯೋಗವನ್ನು ವಿದ್ಯಾರ್ಥಿಗಳು ಸುಲಭವಾಗಿ ಮಾಡಬಹುದು.
ಇದನ್ನೂ ಓದಿ:ವಿಮಾನದಲ್ಲೇ ಹೃದಯಾಘಾತ; ಆಕಾಶದಲ್ಲೇ ಹಾರಿಹೋದ ಪ್ರಾಣಪಕ್ಷಿ
ಮೇಲಿನಿಂದ ಕೆಳಕ್ಕೆ ಸಮಾನ ಗಾತ್ರ ಹೊಂದಿರುವ ವಸ್ತುವನ್ನು ನೆಲದ ಮೇಲೆ ನೇರವಾಗಿ ಇರಿಸಿ, ಆ ವಸ್ತುವಿನ (ಉದಾ: ಮೇಣದ ಬತ್ತಿ ಅಥವಾ ಕೋಲು) ಅತೀ ಸಣ್ಣ ನೆರಳಿನ ಉದ್ದವನ್ನು ಅಳೆಯುವ ಮೂಲಕ ನಮ್ಮ ನೆರಳನ್ನೂ ಅಳೆಯಬಹುದು. ವಸ್ತು ಹಾಗೂ ಅದರ ನೆರಳಿನಿಂದ ಉಂಟಾಗುವ ಲಂಬಕೋನ ತ್ರಿಭುಜದಲ್ಲಿ ವಸ್ತುವು ತ್ರಿಭುಜದ ಅಡಿಪಾಯ ಎಂದು ಪರಿಗಣಿಸಿದರೆ, ಅದರ ನೆರಳು ತ್ರಿಭುಜದ ಅಭಿಮುಖ ಬಾಹು ಆಗಿರುತ್ತದೆ. ಈ ಎರಡು ಬಾಹುಗಳಿಂದಾದ ಕೋನವು ಸ್ಥಳದ ಅಕ್ಷಾಂಶವನ್ನು ನೀಡುತ್ತದೆ. ಖಗೋಳ ಸಮಭಾಜಕ ವೃತ್ತವನ್ನು ಕ್ರಾಂತಿವೃತ್ತ ಎರಡು ಬಿಂದುಗಳಲ್ಲಿ ಛೇದಿಸುತ್ತದೆ. ಈ ಬಿಂದುಗಳೇ ವಿಷುವದ್ಬಿಂದುಗಳು. ಸೂರ್ಯನು ಈ ಬಿಂದುವನ್ನು ಸಂಕ್ರಮಿಸಿ, ಪ್ರತೀ ದಿನ ಆಕಾಶದಲ್ಲಿ ಉತ್ತರದ ಕಡೆ ಚಲಿಸುವುದನ್ನು ನೋಡಬಹುದು.
(ಲೇಖಕರು: ಸಂಯೋಜಕರು, ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ, ಉಡುಪಿ)
ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 12 =
Remember me
