ಬೆಂಗಳೂರು:ಸದ್ಯ ರಾಜಧಾನಿಯಲ್ಲಿ ಕರಾವಳಿ ಭಾಗದ ಗ್ರಾಮೀಣ ಕ್ರೀಡೆ ಕಂಬಳದ ಸದ್ದು ಜೋರಾಗಿದೆ. ಇಂದಿನಿಂದ ಎರಡು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ಕಂಬಳದ ಕಲರವ ಇರಲಿದೆ. ಕಂಬಳದ ಕೋಣಗಳೀಗ ಸಿಲಿಕಾನ್ ಸಿಟಿಗೆ ಕಾಲಿಟ್ಟಿದ್ದು, ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬೆಂಗಳೂರು ಸಾಂಸ್ಕೃತಿಕ ಕ್ರೀಡೆ ಕಂಬಳಕ್ಕೆ ಸಾಕ್ಷಿಯಾಗುತ್ತಿದೆ. ಈ ಮೊದಲು ಕಡಲತೀರದ ಜನರಿಗಷ್ಟೇ ಸೀಮಿತವಾಗಿದ್ದ ಈ ಕ್ರೀಡೆಯನ್ನು ಮೊದಲ ಬಾರಿಗೆ ಬೆಂಗಳೂರು ನಿವಾಸಿಗಳಿಗೂ ಪರಿಚಯಿಸಲಾಗುತ್ತಿದೆ.
ಕರಾವಳಿಯ ಜಾನಪದ ಕ್ರೀಡೆಯನ್ನು ಕಣ್ತುಂಬಿ ಕೊಳ್ಳಲು ಕ್ಷಣಗಣನೆ ಆರಂಭವಾಗಿದೆ. ಇಂದು ನಗರದ ಅರಮನೆಯು ಜೋಡಿ ಕೋಣಗಳ ಮಿಂಚಿನ ಓಟಕ್ಕೆ ಸಾಕ್ಷಿಯಾಗಲಿದೆ. ಇಂದು ಬೆಳಗ್ಗೆ 11ರ ಹೊತ್ತಿಗೆ ಸಭಾ ಕಾರ್ಯಕ್ರಮ ಆರಂಭವಾಗಲಿದೆ. ಆದರೆ, ಕಾರ್ಯಕ್ರಮದ ಅಧಿಕೃತ ಉದ್ಘಾಟನೆ ಆರಂಭ ಆಗುವುದು ಸಿಎಂ ಚಾಲನೆ ಕೊಟ್ಟ ಬಳಿಕ. ಸಂಜೆ 6 ಗಂಟೆಗೆ ಮುಖ್ಯ ಸಭಾ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ.
ಇಂದು ಬೆಳಿಗ್ಗೆ 10.30ರ ಹೊತ್ತಿಗೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಜೋಡು ಕರೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಭಾ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 12ಗಂಟೆಗೆ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರು ಸಾಂಸ್ಕೃತಿಕ ಕಾರ್ಯಕ್ರಮ ವೇದಿಕೆ ಉದ್ಘಾಟನೆ ಮಾಡಲಿದ್ದಾರೆ.
ಸಾರ್ವಜನಿಕರಿಗೆ ಉಚಿತ ಪ್ರವೇಶಕಂಬಳದ ಸಂಭ್ರಮದ ನಡುವೆ ಕೆಲವು ಸಾಧಕರಿಗೆ ಸನ್ಮಾನ ಮಾಡಲಾಗುತ್ತದೆ. ಇಡೀ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳ ಆಕರ್ಷಣೆಯು ಇರಲಿದೆ. ಮಿಂಚಿನ ಓಟದಲ್ಲಿ ಓಡಿ ಪ್ರಶಸ್ತಿ ಮುಡಿಗೇರಿಸಲು 180ಕ್ಕೂ ಅಧಿಕ ಕೋಣಗಳು ಸಜ್ಜಾಗಿವೆ. ಕಂಬಳ ವೀಕ್ಷಿಸಲು ವಿವಿಐಪಿಗಳಿಗೆ ಫನ್ ವರ್ಲ್ಡ್‌ ಕಡೆಯಿಂದ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ಅರಮನೆ ಮೈದಾನದ ಗೇಟ್ ನಂಬರ್ 1, 2, 3 ಹಾಗೂ 4ರಲ್ಲಿ ಸಾರ್ವಜನಿಕರಿಗೆ ಎಂಟ್ರಿ ಇರಲಿದೆ. ಮುಖ್ಯವಾಗಿ ಪ್ರವೇಶ ಉಚಿತವಾಗಿರಲಿದೆ. ಯಾವುದೇ ಟಿಕೆಟ್‌ ಇಲ್ಲದೆ ಉಚಿತವಾಗಿ ಪ್ರವೇಶ ಮಾಡಬಹುದು. ಸಾರ್ವಜನಿಕರು ಯಾವುದೇ ಪಾಸ್‌ ತೋರಿಸುವ ಅಗತ್ಯವೂ ಇಲ್ಲ. ಆದರೆ, ವಿಐಪಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕಂಬಳವನ್ನು ನೋಡಲು ಜನರಿಗೆ ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. 6 ರಿಂದ 7 ಸಾವಿರ ಜನರು ಗ್ಯಾಲರಿಯಲ್ಲಿ ಕುಳಿತುಕೊಂಡು ಕಂಬಳ ನೋಡಬಹುದು.
ಕಂಬಳದ ವಿಶೇಷತೆ* ಬೆಂಗಳೂರು ಕಂಬಳದಲ್ಲಿ ಕೋಣಗಳ 180-200ಜೋಡಿ ಭಾಗಿಯಾಗೋ ಸಾಧ್ಯತೆ* ಬೆಂಗಳೂರು ಕಂಬಳದ ಮುಖ್ಯ ವೇದಿಕೆಗೆ ಪುನಿತ್ ರಾಜ್ ಕುಮಾರ್ ಹೆಸರು* ಕಂಬಳದ ಕರೆಗೆ ರಾಜ ಮಹಾರಾಜ ಎಂದು ಹೆಸರು* ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ* ಕಂಬಳದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮದ ವೈಭವ* ಕರಾವಳಿಯ ಸಾಂಪ್ರದಾಯಿಕ ಹುಲಿ ಕುಣಿತ ಕೂಡ ಇರಲಿದೆ* ಸಾಮಾನ್ಯವಾಗಿ ಕಂಬಳ ಕೋಣಗಳು ಓಡುವ ಟ್ರ್ಯಾಕ್ 147 ಮೀಟರ್ ಉದ್ದ ಇರುತ್ತದೆ* ಆದರೆ ಬೆಂಗಳೂರು ಕಂಬಳದ ಟ್ರ್ಯಾಕ್ 155 ಮೀಟರ್ ಉದ್ದವಿದೆ* ಇದು ಕಂಬಳದ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಲಿದೆ* 228 ಕೋಣಗಳ ಜೋಡಿ ರಿಜಿಸ್ಟ್ರೇಷನ್ ಆಗಿದ್ದು 180-200 ಜೋಡಿ‌ ಫೈನಲ್‌ ಆಗಲಿದೆ* ಕಂಬಳದ ವೇಳೆ ಪ್ರಾಣಿ ರಕ್ಷಣಾ ಕಾಯ್ದೆಯನ್ನು ಅನುಸರಿಸಲಾಗುತ್ತದೆ* ಆಹಾರ, ನೀರಿನ ಬಗ್ಗೆ ಕೋಣಗಳ ಮಾಲೀಕರಿಂದ ವಿಶೇಷ ಕಾಳಜಿ* ಕೋಣಗಳಿಗೆ ಬೈಹುಲ್ಲು, ಊರಿನಿಂದಲೇ ತರಲಾಗುತ್ತದೆ. ಆಹಾರ ಬದಲಾದರೆ ಕೋಣಗಳ ಆರೋಗ್ಯ ಏರುಪೇರು ಆಗುವ ಸಾಧ್ಯತೆ* ಕಂಬಳದ ಸ್ಥಳಕ್ಕೆ ಪಶುವೈದ್ಯರು, ನಾಟಿ ವೈದ್ಯರೂ ಕೂಡ ಬಂದಿದ್ದಾರೆ
ಬಹುಮಾನ* ಗೆದ್ದ ಕೋಣಗಳಿಗೆ ಪ್ರಥಮ ಬಹುಮಾನ 16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು* ಎರಡನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು* ಮೂರನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು ಸಿಗಲಿದೆ* ಕಂಬಳ ಓಡಿಸುವವರಿಗೆ ಕೂಡ ವಿಶೇಷ ಬಹುಮಾನ ಇರಲಿದೆ
ಸಾಂಸ್ಕೃತಿಕ ಕಾರ್ಯಕ್ರಮಬೆಳಿಗ್ಗೆಯಿಂದ ಸಂಜೆವರೆಗೂ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿವೆ.* ಕರಂಗೋಲು ನೃತ್ಯ* ಯಕ್ಷಗಾನ* ಕಾಲಿವುಡ್ ಸಮಕಾಲೀನ ನೃತ್ಯ* ಹುಲಿ ವೇಷ* ಮಾಂಕಳಿ ನಲಿಕೆ ಇತ್ಯಾದಿ
ಟ್ರಾಫಿಕ್ ವಾರ್ಡನ್* ಏರ್ಪೋರ್ಟ್ ಇಂದ ಸುಮಾರು 400 ಜನರ ಟೀಮ್ ಇವತ್ತು ಟ್ರಾಫಿಕ್ ಕಂಟ್ರೋಲ್ ಭಾಗಿ* ಎಲ್ಲಿಯೂ ಏನು ಸಮಸ್ಯೆ ಆಗದ ರೀತಿಯಲ್ಲಿ ಪರೀಕ್ಷಿಸಲು ಟ್ರಾಫಿಕ್ ಪೊಲೀಸರು ಇವರು ಸಹಾಯ* ಆಸ್ಪತ್ರೆ ಇನ್ನಿತರ ಅಗತ್ಯ ಟ್ರಾವೆಲ್ ಗೆ ಅನುಕೂಲ ಆಗಲೂ ಈ ಟ್ರಾಫಿಕ್ ವಾರ್ಡನ್
ಕಂಬಳ ಓಟಗಾರರ ವೇಗ ಜಗತ್ತಿನ ಶರವೇಗದ ಓಟಗಾರ ಉಸೇನ್​ ಬೋಲ್ಟ್​ರನ್ನೂ ಮೀರಿಸುತ್ತೆ!

ಕಂಬಳ ಕಂಗಳಿಗೆ ರಸಗವಳ: ಕರಾವಳಿ ಗ್ರಾಮೀಣ ಕ್ರೀಡೆಗೆ ಸಾಕ್ಷಿಯಾಗಲಿರುವ ಸೆಲೆಬ್ರಿಟಿಗಳಿವರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − one =
Remember me
