ಬೆಂಗಳೂರು:ಕರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಲಾಕ್​ಡೌನ್​ನಿಂದಾಗಿ ಸಂಕಷ್ಟಕ್ಕೆ ಸಿಲುಕಿದವರಿಗೆ ಸರ್ಕಾರ ಈಗಾಗಲೇ ಪ್ಯಾಕೇಜ್​ ಘೋಷಿಸಿದ್ದು, ಒಂದಷ್ಟು ನಿರಾಳತೆಯನ್ನೂ ಮೂಡಿಸಿದೆ. ಇದೀಗ ಈ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಸರ್ಕಾರ ಹೋಟೆಲ್​, ರೆಸ್ಟೋರೆಂಟ್​, ಅಮ್ಯೂಸ್​ಮೆಂಟ್​ ಪಾರ್ಕ್​ನವರಿಗೂ ತೆರಿಗೆ ವಿನಾಯಿತಿ ನೀಡಿ ನೆರವಾಗಿದೆ.
ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ಪ್ರವಾಸೋದ್ಯಮ ವಲಯಕ್ಕೆ ಪ್ರೋತ್ಸಾಹ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರವು ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್​ಗಳಿಗೆ ಆಸ್ತಿ ತೆರಿಗೆ, ವಿದ್ಯುತ್ ಶುಲ್ಕ ಹಾಗೂ ಅಬಕಾರಿ ಶುಲ್ಕಗಳಲ್ಲಿ ಹಲವಾರು ರಿಯಾಯಿತಿಗಳನ್ನು ನೀಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಕರೊನಾ ಮೂರನೇ ಅಲೆಯನ್ನು ತಡೆಯಬಹುದಂತೆ!; ಅದಕ್ಕಾಗಿ ಏನು ಮಾಡಬೇಕು? ಇಲ್ಲಿದೆ ಮಾಹಿತಿ…
ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್​ಗಳಿಗೆ ಪ್ರಸಕ್ತ ಸಾಲಿನಲ್ಲಿ (2021-2022) ಶೇ.50 ಆಸ್ತಿ ತೆರಿಗೆ ಶುಲ್ಕ ವಿನಾಯಿತಿ ಘೋಷಿಸಿದೆ. ಮಾತ್ರವಲ್ಲದೆ, ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್​ಗಳ ಪ್ರಸಕ್ತ ಸಾಲಿನ ಅಂದರೆ ಏಪ್ರಿಲ್ ಮೇ ಜೂನ್ ತಿಂಗಳ ವಿದ್ಯುಚ್ಛಕ್ತಿ ಶುಲ್ಕ ಮನ್ನಾ ಮಾಡಿದೆ.
ಅಬಕಾರಿ ಸನ್ನದು ಶುಲ್ಕ ಮತ್ತು ಹೆಚ್ಚುವರಿ ಸನ್ನದು ಶುಲ್ಕಗಳಲ್ಲಿ ಶೇ. 50 ಮೊತ್ತವನ್ನು ಪಾವತಿಸುವುದು ಮತ್ತು ಉಳಿದ ಶೇ. 50 ಮೊತ್ತವನ್ನು ಆರು ತಿಂಗಳ ಅಂದರೆ ಈ ವರ್ಷದ ಡಿಸೆಂಬರ್ 31ರ ಒಳಗೆ ಪಾವತಿಸಲು ಕಾಲಾವಕಾಶ ನೀಡಲಾಗಿದೆ. ಜತೆಗೆ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿರುವ ಪ್ರತಿ ಪ್ರವಾಸಿ ಮಾರ್ಗದರ್ಶಿಗೆ 5000 ರೂಪಾಯಿಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆಯನ್ನೂ ಮಾಡಲಿದೆ.
ಇದನ್ನೂ ಓದಿ:‘ನಾಯಿಗೆ ರಕ್ತ ಬೇಕಾಗಿದೆ!’; ಅಪಘಾತಕ್ಕೀಡಾಗಿ ಮೂಳೆ ಮುರಿದ ಶ್ವಾನಕ್ಕೆ ನಡೆಯಲಿದೆ ಸರ್ಜರಿ..
ರಾಜ್ಯ ಸರ್ಕಾರ ವಿವಿಧ ಪ್ರವಾಸೋದ್ಯಮ ಉದ್ದಿಮೆದಾರರಿಗೆ ನೀಡಿರುವ ಪುನಶ್ಚೇತನ ಸಹಾಯವು ಸಂಕಷ್ಟ ಕಾಲದಿಂದ ಹೊರಬಂದು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಉತ್ತಮ ಸೇವೆ ಸಲ್ಲಿಸಲು ಸಹಕಾರಿಯಾಗಿದೆ ಎಂದು ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ .
ಸರ್ಕಾರದ ಸಹಾಯ ಹಸ್ತದಿಂದ ಆತಿಥ್ಯ ಹಾಗೂ ಪ್ರವಾಸೋದ್ಯಮ ಕ್ಷೇತ್ರವು ಚೇತರಿಕೆ ಕಾಣಲು ಸಹಕಾರಿಯಾಗಿದ್ದು ಪ್ರವಾಸೋದ್ಯಮ ಕ್ಷೇತ್ರವನ್ನೇ ನಂಬಿಕೊಂಡು ಬದುಕುತ್ತಿರುವ ಲಕ್ಷಾಂತರ ನೌಕರರಿಗೆ ಹಾಗೂ ಉದ್ಯೋಗಿಗಳಿಗೆ ಪುನರ್ಜನ್ಮ ನೀಡಿದಂತಾಗಿದೆ.
ಈ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಹಕಾರಿಯಾಗಲಿದೆ ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಆರ್ಥಿಕ ವಹಿವಾಟು ಹೆಚ್ಚಾಗಿ ರಾಜ್ಯದ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಸಹ ರಾಜ್ಯ ಪ್ರವಾಸೋದ್ಯಮ ಸೊಸೈಟಿ ಪದಾಧಿಕಾರಿಗಳು ಹೇಳಿದ್ದಾರೆ.
ಸೀಟ್​​ ಹಿಂದಿನಿಂದ ಕೈ ತೂರಿಸಿ ಅಲ್ಲೇ ಮುಟ್ಟಲು ಯತ್ನಿಸುತ್ತಿದ್ದ; ಅಸಹ್ಯ ಅನುಭವ ಬಿಚ್ಚಿಟ್ಟ ಯುವತಿ
ನಗರಸಭೆ ಆಯುಕ್ತರೇ ಮಾಡಬಾರದ್ದನ್ನು ಮಾಡಿದರು; ಸ್ಥಳದಲ್ಲಿ ಪೊಲೀಸರಿದ್ದರೂ ಡೋಂಟ್ ಕೇರ್!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − ten =
Remember me
