ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಕರೊನಾ ಸೋಂಕಿತರಿಗಿಂತ ಸೋಂಕಿನಿಂದ ಮುಕ್ತರಾಗಿ ಬಿಡುಗಡೆ ಆಗಿರುವವರೇ ಹೆಚ್ಚಾಗಿರುವುದು ಕೋವಿಡ್​-19 ಬುಲೆಟಿನ್​ನಲ್ಲಿ ಕಂಡುಬಂದಿದೆ.
ಮಂಗಳವಾರ ಒಂದೇ ದಿನ ರಾಜ್ಯದಲ್ಲಿ 9,993 ಸೋಂಕಿತರು ಹೊಸದಾಗಿ ಪತ್ತೆಯಾಗಿದ್ದು, ಸೋಂಕಿತರ ಒಟ್ಟು ಪ್ರಮಾಣ 6,57,705ಕ್ಕೆ ಏರಿದೆ. ಆದರೆ ಒಂದೇ ದಿನದಲ್ಲಿ 10,228 ಮಂದಿ ಸೋಂಕುಮುಕ್ತರಾಗಿ ಮನೆಗೆ ಮರಳಿದ್ದಾರೆ. ಈ ಮೂಲಕ ಇದುವರೆಗೆ ಕರೊನಾದಿಂದ ಗುಣವಾದವರ ಪ್ರಮಾಣ 5,33,074ಕ್ಕೆ ತಲುಪಿದೆ.
ಇದನ್ನೂ ಓದಿ:ಕರೊನಾ ಸೋಂಕಿನ ಲಕ್ಷಣ ಇದ್ಯಾ?: ಹಾಗಿದ್ರೆ ಏನ್​ ಮಾಡ್ಬೇಕು ಅಂತ ಸಚಿವರು ಹೇಳಿದ್ದಾರೆ, ನೋಡಿ…
ಮತ್ತೊಂದೆಡೆ 1,15,151 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ 848 ಮಂದಿ ಗಂಭೀರ ಸ್ಥಿತಿಯಲ್ಲಿದ್ದು ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇಸರದ ಸಂಗತಿ ಎಂದರೆ ಮಂಗಳವಾರ ಒಂದೇ ದಿನ 91 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ಒಟ್ಟು 9461 ಮಂದಿ ಕರೊನಾದಿಂದಾಗಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:Video | ಏನಾಶ್ಚರ್ಯ.. ದೇವಿಯ ಮುಖದಲ್ಲಿ ಶಿವನ ಸ್ವರೂಪ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
