ಬೆಂಗಳೂರು:ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಇಂದು ಜನ್ಮದಿನದ ಸಂಭ್ರಮವಾಗಿದ್ದು, ರಾಜಕೀಯ ನಾಯಕರು, ಗಣ್ಯರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಭಗವಂತನು ಅವರಿಗೆ ಹೆಚ್ಚಿನ ಆಯುರಾರೋಗ್ಯ ನೀಡಲಿಯೆಂದು ಹಾರೈಸುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ದೇವರ ಆಶೀರ್ವಾದ ಸದಾ ಇರಲಿ ಎಂದು ಹಾರೈಸುತ್ತೇನೆ ಎನ್ನುವ ಮೂಲಕ ಶುಭಾಶಯ ಕೋರಿದ್ದಾರೆ.
ಶುಭಾಶಯ ಕೋರಿದ ಡಿಕೆಶಿ:
ನಮ್ಮ‌ ಶಾಸಕಾಂಗ ಪಕ್ಷದ ನಾಯಕರು ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನವು ಸುಖ-ಶಾಂತಿ-ನೆಮ್ಮದಿಯಿಂದ ತುಂಬಿರಲಿ ಎಂದು ಆಶಿಸುತ್ತೇನೆ ಎನ್ನುವ ಮೂಲಕ ರಾಜ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.
ದೊಡ್ಡಗೌಡ್ರು ಶುಭಾಶಯ:
ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ನಿಮಗೆ ಸುಖ-ಶಾಂತಿ-ನೆಮ್ಮದಿ ನೀಡಲೆಂದು ಶುಭ ಹಾರೈಸುತ್ತೇನೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಶುಭಾಶಯ ಕೋರಿದ್ದಾರೆ.
ಅಲ್ಲದೇ ರಾಜಕೀಯ ನಾಯಕರು, ಚಿತ್ರರಂಗದವರು, ಉದ್ಯಮಿಗಳು ಕೂಡ ಸಿದ್ದರಾಮಯ್ಯನವರಿಗೆ ಶುಭಾಶಯ ಕೋರಿದ್ದಾರೆ.
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:3 × 4 =
Remember me
