ಬೆಂಗಳೂರು:ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಶುಕ್ರವಾರ ಬಸ್ ಡಿಪೋ, ನಿಲ್ದಾಣ, ಪ್ರಮುಖ ವೃತ್ತಗಳಲ್ಲಿ ಬಜ್ಜಿ-ಬೋಂಡ, ಕಾಫಿ-ಟೀ ತಯಾರಿಸಿ ಮಾರಾಟ ಮಾಡಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ವಿವಿಧ ಬೇಡಿಕೆ ಈಡೇರಿಕೆಗಾಗಿ ಸಾರಿಗೆ ನೌಕರರು ಏ. 7ರಂದು ಮುಷ್ಕರ ನಡೆಸುತ್ತಿದ್ದಾರೆ. ಅದಕ್ಕೂ ಮುಂಚಿನ 6 ದಿನಗಳ ಕಾಲ ವಿವಿಧ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಲಾಗುತ್ತಿದೆ. ಅದರಂತೆ ಗುರುವಾರ ಕಪ್ಪುಪಟ್ಟಿ ಧರಿಸಿ ನೌಕರರು ಕೆಲಸ ಮಾಡಿದ್ದರು. ಶುಕ್ರವಾರ ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಬಜ್ಜಿ, ಬೋಂಡ, ವಡೆ, ಕಾಫಿ, ಟೀ ತಯಾರಿಸಿ ಮಾರಾಟ ಮಾಡಿ ಗಮನ ಸೆಳೆದರು.
ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮೆಜೆಸ್ಟಿಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಸಾಂಕೇತಿಕವಾಗಿ ಸರ್ಕಾರದ ಗಮನ ಸೆಳೆಯಲು ಪ್ರತಿಭಟಿಸಲಾಗುತ್ತಿದೆ. ಈಗಲಾದರೂ ನೌಕರರಿಗೆ ಸೂಕ್ತ ವೇತನ ನೀಡಬೇಕು. ಡಿಸೆಂಬರ್‌ನಲ್ಲಿ ಮಾಡಲಾದ ಮುಷ್ಕರದ ವೇಳೆ ಸರ್ಕಾರ ನೀಡಿದ್ದ ಭರವಸೆ ಈಡೇರಿಸಿಲ್ಲ. ಇದೀಗ ಏ. 7ರಂದು ಮತ್ತೆ ಮುಷ್ಕರ ನಡೆಸಲಾಗುತ್ತಿದೆ. ಒಂದು ವಾರ ಕಾಲ ಚಳವಳಿ ಸಪ್ತಾಹ ಹಮ್ಮಿಕೊಂಡಿದ್ದೇವೆ. ಇನ್ನೂ ನಾಲ್ಕು ದಿನ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.


ಇದನ್ನೂ ಓದಿ:ಮೈಮೇಲೇ ಲಾರಿ ಚಲಿಸಿ 3 ವರ್ಷದ ಮಗು ಸ್ಥಳದಲ್ಲೇ ಸಾವು; ಪುತ್ರಿಯೊಂದಿಗೆ ದಂಪತಿ ಸಾಗುತ್ತಿದ್ದ ಬೈಕ್​ಗೆ ಲಾರಿ ಡಿಕ್ಕಿ
ಮಾನವ ಸರಪಳಿ:ಚಳವಳಿ ಸಪ್ತಾಹದ ಹಿನ್ನೆಲೆಯಲ್ಲಿ ಶನಿವಾರ ನಾಲ್ಕು ರಸ್ತೆ ಸಾರಿಗೆ ನಿಗಮಗಳ ವ್ಯಾಪ್ತಿಯ ಪ್ರಮುಖ ವೃತ್ತಗಳಲ್ಲಿ ಸಾರಿಗೆ ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ಮಾನವ ಸರಪಳಿ ನಿರ್ಮಿಸಿ, ತಮ್ಮ ಬೇಡಿಕೆ ಈಡೇರಿಸುವಂತೆ ಭಿತ್ತಿಪತ್ರ ಪ್ರದರ್ಶಿಸಲಿದ್ದಾರೆ. ಅದೇ ರೀತಿ ಏ.4ರಂದು ಕರಪತ್ರ ಹಂಚಿಕೆ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ, ಏ.5ರಂದು ಸಾರಿಗೆ ನಿಗಮಗಳ ಘಟಕಗಳಲ್ಲಿ ಧರಣಿ ಸತ್ಯಾಗ್ರಹ ಹಾಗೂ ಏ.6ರಂದು ನೌಕರರು ಹಾಗೂ ಕುಟುಂಬ ಸದಸ್ಯರೊಂದಿಗೆ ಸಾಮೂಹಿಕ ಉಪವಾಸ ಸತ್ಯಾಗ್ರಹ ಮಾಡಲಾಗುತ್ತದೆ.

ಮತ್ತೆ ಕೋವಿಡ್ ನಿರ್ಬಂಧ: ಶಾಲೆ, ಜಿಮ್​, ಕ್ಲಬ್, ಪಾರ್ಟಿಹಾಲ್​, ಈಜುಕೊಳ ಬಂದ್​; ಬಾರ್-ರೆಸ್ಟೋರೆಂಟ್​, ಚಿತ್ರಮಂದಿರಗಳಲ್ಲಿ ಗರಿಷ್ಠ ಶೇ. 50 ಆಸನ ಭರ್ತಿಗಷ್ಟೇ ಅವಕಾಶ

ಶಾಕಿಂಗ್: ರಾಜ್ಯದಲ್ಲಿ ಹೆಚ್ಚಿದ ಕರೊನಾ ಸೋಂಕು, ಸಕ್ರಿಯ ಪ್ರಕರಣಗಳಲ್ಲಿ ಕರ್ನಾಟಕ 2ನೇ ಸ್ಥಾನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
