ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಬೆಳಗ್ಗೆ 9.30ರಿಂದ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಸಚಿವಾಲಯವು ಸಕಲ ಸಿದ್ಧತೆ ನಡೆಸಿದೆ. ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಭಾನುವಾರ ಸಂಜೆ ಸಿಎಂ ಗೃಹ ಕಚೇರಿ ಕೃಷ್ಣಾ ಕ್ಕೆ ಭೇಟಿ ನೀಡಿ ಅಂತಿಮ ಸಿದ್ಧತೆ ಪರಿಶೀಲಿಸಿದರು.
ಅಹವಾಲು ಸ್ವೀಕರಿಸಲು ಒಟ್ಟು 20 ಕೌಂಟರ್ ಸ್ಥಾಪಿಸಿದ್ದು, ಅಂಗವಿಕಲರು ಮತ್ತು ಹಿರಿಯ ನಾಗರಿಕರಿಗೆ ಎರಡು ಪ್ರತ್ಯೇಕ ಕೌಂಟರ್ ಮೀಸಲಿರಿಸಲಾಗಿದೆ. ಆಗಮಿಸುವ ನಾಗರಿಕರಿಗೆ ಕುಡಿಯುವ ನೀರು, ಆಹಾರ ಹಾಗೂ ಶೌಚಗೃಹ ಮತ್ತು ಇತರ ವ್ಯವಸ್ಥೆ ಇರಲಿದೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅಹವಾಲು ಆಲಿಸಿ ಪರಿಹಾರ ಸೂಚಿಸುವರು.
ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ತರುವಂತೆ ಕೋರಲಾಗಿದೆ. ಇದರಿಂದ ತಂತ್ರಾಂಶದಲ್ಲಿ ದಾಖಲಿಸುವ ಅರ್ಜಿಗಳ ಸ್ಥಿತಿಗತಿ ಪತ್ತೆಹಚ್ಚಲು ಅನುಕೂಲವಾಗಲಿದೆ ಎಂದು ಸಿಎಂ ಕಚೇರಿ ತಿಳಿಸಿದೆ. 550ಕ್ಕೂ ಅಧಿಕ ಪೊಲೀಸರು, ಅಧಿಕಾರಿ, ಸಹಾಯಕ ಸಿಬ್ಬಂದಿಯ ನ್ನೊಳಗೊಂಡು 1000ಕ್ಕೂ ಅಧಿಕ ಜನರನ್ನು ಕಾರ್ಯಕ್ರಮಕ್ಕೆ ನಿಯೋಜಿಸಲಾಗಿದೆ.
ಫ್ರೀಡಂ ಪಾರ್ಕ್ ಸುತ್ತ ಸಂಚಾರ ದಟ್ಟಣೆ; ಪರ್ಯಾಯ ಮಾರ್ಗ ಬಳಸಿ ಟ್ರಾಫಿಕ್ ಪೊಲೀಸರ ಸಲಹೆ

ಆತ್ಮಹತ್ಯೆ ತಡೆಗೆ ವೀ ಕೇರ್; ಹೆಲ್ಪ್‌ಲೈನ್ 82779-46600ಗೆ ಕರೆ ಮಾಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − seven =
Remember me
