ಮಂಗಳೂರು:ಜಿಲ್ಲೆಯ ಸುರತ್ಕಲ್ ಟೋಲ್​ ಗೇಟ್​ ತೆರವಿಗೆ ಕೊನೆಗೂ ಸೂಚನೆ ಬಂದಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡುವ ಮೂಲಕ ಟೋಲ್ ಗೇಟ್ ರದ್ದಾಗಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ಕಾನೂನು ಬಾಹಿರವಾಗಿ ನಡೆಯುತ್ತಿದೆ ಎಂದು ಹೇಳಲಾಗುವ ಸುರತ್ಕಲ್ ಟೋಲ್​ ಗೇಟ್ ತೆರವಾಗಬೇಕೆಂದು ಇತ್ತೀಚೆಗೆ ನಿರಂತರವಾಗಿ ಹೋರಾಟಗಳು ನಡೆಯುತ್ತಿತ್ತು. ಪ್ರತಿಭಟನಾಕಾರರು ಅಹೋರಾತ್ರಿ ಸ್ಥಳದಲ್ಲಿಯೇ ಹೋರಾಟ ಮಾಡುತ್ತಿದ್ದರು. ಇದೀಗ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು, ಟೋಲ್ ಸಂಗ್ರಹ ರದ್ದಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದೆ. ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದಿದ್ದಾರೆ.
ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ಶ್ರೀ@nitin_gadkariಹಾಗೂ ಪ್ರಧಾನಿ ಶ್ರೀ@narendramodiಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ.— Nalinkumar Kateel (@nalinkateel)November 14, 2022
ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ಶ್ರೀ@nitin_gadkariಹಾಗೂ ಪ್ರಧಾನಿ ಶ್ರೀ@narendramodiಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ.
ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದರು. ಇದೀಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ಹೇಳಿದ್ದಾರೆ.
ಸುರತ್ಕಲ್ ಟೋಲ್ ಗೇಟ್ ತೆರವು ಕಾರ್ಯ ಶೀಘ್ರದಲ್ಲಿಯೇ ಆಗಲಿದೆ. ಸದ್ಯ ಕೇಂದ್ರ ಸರ್ಕಾರದಿಂದ ಅಂತಿಮ ಹಂತದ ಅಧಿಸೂಚನೆ ಬರಬೇಕಿದೆ. ಸೂಚನೆ ಬಂದ ತಕ್ಷಣ ಟೋಲ್ ಗೇಟ್ ತೆರವು ಕಾರ್ಯ ಆಗಲಿದೆ ಎಂದು ನ.12ರಂದು ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 3 =
Remember me
