ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ರಚನೆಯ ವಿಷಯ ಕೊನೆಗೂ ಮಂಗಳವಾರ ರಾತ್ರಿ ಅಂತಿಮಗೊಂಡಿದ್ದು, ಬುಧವಾರ ಮಧ್ಯಾಹ್ನ 2.15ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ದೆಹಲಿಯಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ನೂತನ ಸಚಿವರು ಯಾರಾಗುತ್ತಾರೆ ಎಂಬ ಬಗ್ಗೆ ಈವರೆಗೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಆದರೆ ಸಂಭಾವ್ಯರ ಹೆಸರುಗಳು ಕೇಳಿಬರುತ್ತಿವೆ.
ನಾಳೆ ಬೆಳಗ್ಗೆಯೇ ಅಧಿಕೃತ ಪಟ್ಟಿಯನ್ನು ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ಕಳಿಸಲಿದ್ದಾರೆ. ಮಂತ್ರಿಗಳಾಗಲಿರುವ ಬಹುತೇಕ ಶಾಸಕರಿಗೆ ಈವರೆಗೂ ದೂರವಾಣಿ ಕರೆ ಹೋಗಿಲ್ಲ. ಆದರೆ ನಾಳೆಯ ಮಧ್ಯಾಹ್ನದ ಹೊತ್ತಿಗೆ ಬೆಂಗಳೂರಿನಲ್ಲಿರುವಂತೆ ಕೆಲವರಿಗೆ ಸೂಚನೆ ನೀಡಲಾಗಿದೆ.
ಕಳೆದ ಎರಡು ದಿನಗಳಿಂದ ಮುಖ್ಯಮಂತ್ರಿ ಬೊಮ್ಮಾಯಿ ಅವರು ದೆಹಲಿಯಲ್ಲಿದ್ದು ತಮ್ಮ ಸಂಪುಟ ರಚನೆ ಕುರಿತು ಬಿಜೆಪಿಯ ವರಿಷ್ಠರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದರು. ಸಚಿವ ಸ್ಥಾನದ ಆಕಾಂಕ್ಷಿಗಳನೇಕರು ಕೂಡ ದೆಹಲಿಯಾತ್ರೆ ಕೈಗೊಂಡಿದ್ದರು.
ನಿಮ್ಮಲ್ಲಿ ಈ ಲಕ್ಷಣಗಳಿದ್ದರೆ ತುರ್ತಾಗಿ ಕರೊನಾ ಲಸಿಕೆ ತೆಗೆದುಕೊಳ್ಳುವುದು ಅನಿವಾರ್ಯ..
ಪೊಲೀಸರಿನ್ನು ಕ್ರಿಮಿನಲ್‌ಗಳ ಜತೆ ಪಾರ್ಟಿಗೆ ಹಾಜರಾಗುವಂತಿಲ್ಲ; ರೌಡಿ-ಗೂಂಡಾಗಳ ಸಮಾರಂಭಗಳಲ್ಲಿ ಭಾಗಿ ಆಗುವಂತಿಲ್ಲ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
