ಬೆಂಗಳೂರು:ಕರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಘೋಷಿಸಿದ್ದ ಲಾಕ್​ಡೌನ್​ ಇನ್ನೇನು ಮುಗಿಯುವ ಹಂತಕ್ಕೆ ಬಂದಿದ್ದು, ಲಾಕ್​ಡೌನ್ ಇಲ್ಲಿಗೇ ಮುಗಿಯುತ್ತಾ ಇಲ್ಲವೇ ಮುಂದುವರಿಯುತ್ತಾ ಎಂಬ ಪ್ರಶ್ನೆ ಈಗ ಎಲ್ಲರಲ್ಲೂ ಮೂಡಿದೆ. ಈ ಪ್ರಶ್ನೆಗೆ ನಾಳೆ ಉತ್ತರ ಸಿಗುವ ಸಾಧ್ಯತೆ ನಿಚ್ಚಳವಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿವಿಧ ವಿಷಯಗಳ ಸಲುವಾಗಿ ನಾಳೆ ಸರಣಿ ಸಭೆ ನಡೆಸಲಿದ್ದು, ಆ ಪೈಕಿ ಲಾಕ್​ಡೌನ್​ ಮುಂದುವರಿಕೆ ಕುರಿತ ವಿಚಾರವಾಗಿಯೂ ಮಾತುಕತೆ ನಡೆದು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಬೆಳಗ್ಗೆ ಹನ್ನೊಂದು ಗಂಟೆಗೆ ಸಚಿವರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಲಿರುವ ಸಿಎಂ, ಲಾಕ್​ಡೌನ್​ ವಿಸ್ತರಣೆ ಮತ್ತು ವಿಶೇಷ ಪ್ಯಾಕೇಜ್ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೆ ಇಂದು ಪಿಎಂ ಮೋದಿ ವಿಡಿಯೋ ಕಾನ್ಫರೆನ್ಸ್ ಮಾಹಿತಿಯನ್ನೂ ನಾಳೆ ನೀಡಲಿದ್ದಾರೆ. ಈ ನಡುವೆ ಲಾಕ್​ಡೌನ್​ ಮುಂದುವರಿಕೆ ಮತ್ತು ವಿಶೇಷ ಪ್ಯಾಕೇಜ್ ಘೋಷಣೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಳಗ್ಗೆ 11.30 ಗಂಟೆಗೆ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ಅದರಲ್ಲಿ ಇವೆಲ್ಲದಕ್ಕೂ ಒಂದು ಸ್ಪಷ್ಟನೆ ಸಿಗಲಿದೆ.
ಇನ್ನು ಸಚಿವರ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರ ಪ್ರಕಟಣೆ ಮಾಡುವ ಸಾಧ್ಯತೆ ಕೂಡ ಇದೆ. ಒಂದು ಗಂಟೆಗೆ ಗ್ರೀನ್ ಕೋ ಸಂಸ್ಥೆಯಿಂದ ಕೊಡಲಾಗುತ್ತಿರುವ 200 ಲಾರ್ಜ್ ಆಕ್ಸಿಜನ್ ಕಾನ್ಸೆಂಟ್ರೇಟರ್​ಗಳನ್ನು ಅವರು ಸ್ವೀಕರಿಸಲಿದ್ದಾರೆ. ಮಧ್ಯಾಹ್ನ ಒಂದು ಗಂಟೆಗೆ 150 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮತ್ತು ಸಾರ್ವಜನಿಕ ಸೇವೆಗೆ ಒದಗಿಸುವ ಕಾರ್ಯವನ್ನು ಕೂಡ ಮಾಡಲಿದ್ದಾರೆ.
ಇದನ್ನೂ ಓದಿ:ಮಗ ಮಾಡಿದ ಆ ಒಂದು ಕೆಲಸ ಅಮ್ಮನನ್ನೂ ಬಲಿ ಪಡೆಯಿತಾ?; ಪತಿ ಸತ್ತ ಕೆಲವೇ ಕ್ಷಣಗಳಲ್ಲಿ ಪತ್ನಿಗೂ ಸಾವು!
ಮತ್ತೊಂದೆಡೆ ವಿವಿಐಪಿ ಟರ್ಮಿನಲ್​ನಲ್ಲಿ ಇರುವ 1000 ಹಾಸಿಗೆಗಳ ಆಕ್ಸಿಜನ್ ಸೌಲಭ್ಯವುಳ್ಳ ಕೋವಿಡ್ ಕೇರ್ ಸೆಂಟರ್​ಅನ್ನು ಸಂಜೆ 4.30ಕ್ಕೆ ಗೃಹ ಕಚೇರಿ ಕೃಷ್ಣಾದಿಂದಲೇ ಆನ್​ಲೈನ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ಜೆಎಸ್​ಡಬ್ಲ್ಯು ಸ್ಟೀಲ್ ಸಂಸ್ಥೆ ವತಿಯಿಂದ ಮಾಡಿರುವ ಕೋವಿಡ್ ಕೇರ್ ಸೆಂಟರ್​ ಸಂಜೆ 5ಕ್ಕೆ ಉದ್ಘಾಟಿಸಲಿದ್ದಾರೆ. ನಂತರ ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್ ಜತೆ ವರ್ಚುವಲ್ ಸಭೆ ನಡೆಸಲಿದ್ದಾರೆ. ಸಂಜೆ ಆರಕ್ಕೆ ಕರೋನ ವೈರಾಣು ವಿಷಯಕ್ಕೆ ಸಂಬಂಧಿಸಿದಂತೆ ಉಸ್ತುವಾರಿ ಸಚಿವರ ಜತೆ ಸಭೆ ನಡೆಸಿ ಮುಂದೆ ತೆಗೆದುಕೊಳ್ಳಬೇಕಾದ ಕಠಿಣ ನಿಯಮಗಳ ಬಗ್ಗೆ ಚರ್ಚಿಸಲಿದ್ದಾರೆ.
ನಾಳೆ ಸಿಎಂ ನೇತೃತ್ವದ ಸಚಿವರ ಸಭೆಗೆ ಆಯ್ದ ಸಚಿವರಿಗೆ ಆಹ್ವಾನ ನೀಡಲಾಗಿದೆ. ಲಾಕ್​ಡೌನ್​ ವಿಸ್ತರಣೆ ಮತ್ತು ವಿಶೇಷ ಪ್ಯಾಕೇಜ್ ಬಗ್ಗೆ ಮಾಹಿತಿ ನೀಡುವ ಕುರಿತ ಸಭೆಗೆ ಡಿಸಿಎಂ ಗೋವಿಂದ ಕಾರಜೋಳ, ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಕೆ.ಎಸ್ ಈಶ್ವರಪ್ಪ, ಆರ್ ಆಶೋಕ್, ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ವಿ.ಸೋಮಣ್ಣ, ಬಸವರಾಜ ಬೊಮ್ಮಯಿ, ಜೆ.ಸಿ ಮಧುಸ್ವಾಮಿ, ಎಸ್.ಟಿ ಸೋಮಶೇಖರ್, ಡಾ.ಕೆ. ಸುಧಾಕರ್ ಹಾಗೂ ಅರವಿಂದ ಲಿಂಬಾವಳಿ ಅವರಿಗೆ ಆಹ್ವಾನ ನೀಡಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ, ಸಹಕಾರ, ಸಾರಿಗೆ, ಕಾರ್ಮಿಕ ಇಲಾಖೆ, ತೋಟಗಾರಿಕೆ ಕಾರ್ಯದರ್ಶಿಗಳು ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ:ಹೆಂಡತಿಗೆ ಕಿರುಕುಳ ಕೊಟ್ಟು ಸಾವು ತಂದುಕೊಂಡ ಗಂಡ; ಆಕೆ ಹೊಡೆಯಿರಿ ಎಂದಳು, ಅವರಿಬ್ಬರು ಕೊಂದೇ ಬಿಟ್ಟರು…
ಅವಳಿಗೆ ಗೊತ್ತೇ ಆಗದಂತೆ ಮಗಳು ಹುಟ್ಟಿದ್ಲಂತೆ!; ನಿದ್ರೆಯಲ್ಲಿದ್ದಾಗ ಆಯಿತು ಹೆರಿಗೆ!

ಕರೊನಾದಿಂದ ಸತ್ತ 300ಕ್ಕೂ ಹೆಚ್ಚು ಜನರ ಶವಸಂಸ್ಕಾರ ಮಾಡಿದ್ದವ ಕೊನೆಗೆ ಕೋವಿಡ್​ಗೇ ಬಲಿಯಾದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 11 =
Remember me
